ಶಿವಮೊಗ್ಗ, ಜುಲೈ 11,
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಿಂದ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ.
ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಅರ್ಜಿ ಅವಧಿಯನ್ನು ಜುಲೈ 10 ರವರೆಗೆ ನಿಗದಿಪಡಿಸಲಾಗಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಾದ ಎಂಬಿಬಿಎಸ್, ಬಿಡಿಎಸ್, ಬಿ.ಆಯುಷ್, ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಫಾರ್ಮಸಿ, ಅಗಿಕಲ್ಚರ್ ಸೈನ್ಸ್, ವೆಟರ್ನರಿ, ಅಂಡ್ ಫಾರ್ಮ್ ಸೈನ್ಸ್ ಕೋರ್ಸಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕವನ್ನು ಜು.10 ರಿಂದ ಜು.15 ರವರೆಗೆ ಮುಂದೂಡಲಾಗಿರುತ್ತದೆ.
ನಿಗಮದ ವೆಬ್‍ಸೈಟ್ www.kmdconline.karnataka.gov.in ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜು.15 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-228262 ಗೆ ಸಂಪರ್ಕಿಸಬಹುದೆಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ.