Shimoga/July 20

ಕುವೆಂಪು ವಿಶ್ವವಿದ್ಯಾಲಯದ 2021-22 ನೇ ಸಾಲಿನ ಎಂ ಎಸ್ಸಿ ಸ್ನಾತಕೋತ್ತರ ಮನಃಶಾಸ್ತ್ರ ಪರೀಕ್ಷೆಯಲ್ಲಿ ನಗರದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯರಾದ ಗಾಯಿತ್ರಿ ವಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ ಹಾಗೂ ದೇವಿಕಾ ಎಂ ದ್ವಿತೀಯ ರ‍್ಯಾಂಕ್ ಗಳಿಸಿದ್ದಾರೆ, ಜುಲೈ 22ರಂದು ನಡೆಯಲಿರುವ ಕುವೆಂಪು ವಿವಿಯ 33ನೇ ಘಟಿಕೋತ್ಸವದಲ್ಲಿ ಈ ವಿದ್ಯಾರ್ಥಿನಿಯರು ಪ್ರಶಸ್ತಿ ಪತ್ರವನ್ನು ಪಡೆಯಲಿದ್ದಾರೆ,

ಕಾಲೇಜಿನ ಸ್ನಾತಕೋತ್ತರ ಮನಃಶಾಸ್ತ್ರದ ಮೊದಲ ಬ್ಯಾಚ್ ನಲ್ಲಿಯೇ ಶೇ 100 ರಷ್ಟು ಫಲಿತಾಂಶ ಹಾಗೂ ಎರಡು ರ‍್ಯಾಂಕ್ ಗಳು ಲಭಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ,

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಮನಃಶಾಸ್ತ್ರ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಮಾನಸ ಆಸ್ಪತ್ರೆಯ ಮೂಲಕ ಕ್ಲಿನಿಕಲ್ ಹಾಗೂ ಕೌನ್ಸಿಲಿಂಗ್ ಕೌಶಲ್ಯಗಳು ಮತ್ತು ಮನಃಶಾಸ್ತ್ರದ ಸಂಶೋಧನಾ ಕೌಶಲ್ಯಗಳ ನೇರ ತರಬೇತಿ ಸಿಗುತ್ತದೆ, ಆದ್ದರಿಂದ ಈ ಕಾಲೇಜಿನಲ್ಲಿ ಸ್ನಾತಕೋತ್ತರ ಮನಃಶಾಸ್ತ್ರ ಪದವಿಯನ್ನು ಪೂರೈಸಿದ ಎಲ್ಲಾ ವಿದ್ಯಾರ್ಥಿಗಳಿಗೂ ನೇರವಾಗಿ ಉದ್ಯೋಗ ದೊರೆತಿದೆ,

ಈ ಕುರಿತಂತೆ ಮಾತನಾಡಿದ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ ಎ ಪೈ ರವರು ಇದೊಂದು ಅತ್ಯುತ್ತಮ ಶೈಕ್ಷಣಿಕ ಸಾಧನೆಯಾಗಿದ್ದು ನಮ್ಮ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಎಂದು ತಿಳಿಸಿದ್ದಾರೆ,

ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ ಎ ಪೈ, ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ ವಿ ಶಾನ್ ಭಾಗ್, ಡಾ.ವಾಮನ್ ಶಾನ್ ಭಾಗ್, ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಸಂಯೋಜಕರಾದ ಸಿಸ್ಟರ್ ಮಾರೀ ಇವ್ಲಿನ್, ಎಂ ಸಿ ಸಿ ಎಸ್ ನ ನಿರ್ದೇಶಕರಾದ ಡಾ.ರಾಜೇಂದ್ರ ಚೆನ್ನಿ, ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅರ್ಚನಾ ಕೆ ಭಟ್, ಕಾಲೇಜಿನ ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ, ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ವರ್ಗದವರು ಮತ್ತು ಎಲ್ಲಾ ವಿದ್ಯಾರ್ಥಿಗಳು ರ‍್ಯಾಂಕ್ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!