night police car lights in city - close-up with selective focus and bokeh background blur
ನಗರದ ಚರ್ಚ್‌ವೊಂದರ ಪಾದ್ರಿ ಹಾಗೂ ಚರ್ಚ್‌ನ ಪಿ.ಯು ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫೆರ್ನಾಂಡಿಸ್ (೪೮) ಅವರನ್ನು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ (ಪೊಕ್ಸೊ) ಅಡಿ ಕೋಟೆ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಇವರನ್ನು ಬಂಧಿಸಲಾಗಿದೆ.

ನಮ್ಮ ಮಗಳ ಜೊತೆ ಪ್ರೀತಿ, ಪ್ರೇಮದ ನಾಟಕವಾಡಿರುವ ಪಾದ್ರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದು ೧೭ ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಪಾಲಕರು


ದೂರು ನೀಡಿದ್ದಾರೆ. ಕೋಟೆ ಠಾಣೆ ಪೊಲೀಸರು ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮತ್ತು ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಡಿವೈಎಸ್‌ಪಿ ಬಾಲರಾಜ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದೆ.