ಶಿವಮೊಗ್ಗ, ಆ.೦೨:
ಜಿಲ್ಲಾ ಪೊಲೀಸ್ ಇಲಾಖೆ ಕಾನೂನು ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಇಂದು ಬಿಜೆಪಿಯ ಶಾಸಕರು ಹಾಗೂ ಪ್ರಮುಖರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ಜು. ೨೬ ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ

ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯ ಕರ್ತರು ಸಚಿವರ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶಿಸಿ ಸಭೆಗೆ ಅಡ್ಡಿಪಡಿಸಿದ್ದರು ಎಂಬ ಕಾರಣಕ್ಕೆ ಯುವ ಮೋರ್ಚಾ ಕಾರ್ಯ ಕರ್ತರನ್ನು ಬಂಧಿಸಿ ಸಂಜೆಯವರೆಗೆ ಜಯನಗರ ಠಾಣೆಯಲ್ಲಿ ಇರಿಸಿ ಬಳಿಕ ಠಾಣೆಯ ಪಿ.ಎಸ್.ಐ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ ಮೇರೆಗೆ ಸುಮೊಟೋ ಕೇಸ್ ದಾಖಲಿಸಿ ಕೊಳ್ಳಲಾಗಿದೆ. ಯುವ ಮೋರ್ಚಾ ಕಾರ್ಯಕರ್ತರ ಮೇಲೆ ವಿವಿಧ ಸೆಕ್ಷನ್ ಗಳನ್ನು ಹಾಕಿ ಬಳಿಕ ಬಿಡುಗಡೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ಡಿ.ಎಸ್. ಅರುಣ್ ಹಾಗೂ ಇತರ ನಾಯಕರು ಠಾಣೆ ಮುಂದೆ ಪೊಲೀಸರ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ಸಂದರ್ಭದಲ್ಲಿ ಪೊಲೀ ಸರು ಶಾಸಕರಿಗೆ ಹೊರಗೆ ನಿಲ್ಲಿಸಿ ಅವಮಾನ ಮಾಡಿದ್ದಾರೆ. ಏಕಪಕ್ಷೀಯ ವರ್ತನೆ ತೋರಿದ್ದಾರೆ ಎಂದು ಬಿಜೆಪಿ ಮುಖಂಡರು ದೂರಿದ್ದಾರೆ.,

ಕುವೆಂಪು ವಿವಿ ಘಟಿಕೋತ್ಸವ ನಡೆಯುವ ಸಂದರ್ಭದಲ್ಲಿ ಸಭಾಂಗಣ ದಲ್ಲಿ ರಾಜ್ಯಪಾಲರು ಭಾಷಣ ಮಾಡು ವಾಗ ಅಡ್ಡಿಪಡಿಸಿದ ಎನ್.ಎಸ್.ಯು.ಐ. ಕಾರ್ಯರ್ತರ ಮೇಲೆ ಯಾವುದೇ ಕೇಸ್ ದಾಖಲಿಸಿಲ್ಲ. ಅವರನ್ನು ಬಿಟ್ಟು ಕಳಿಸಲಾ ಗಿದೆ. ಪ್ರಜಾಪ್ರಭುತ್ವದಲ್ಲಿ ಕೆಲವೊಂದು ಸಂದರ್ಭದಲ್ಲಿ ಹೋರಾಟಗಳು ಅನಿವಾರ್ಯ. ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಪಠ್ಯವನ್ನು ಕಿತ್ತು ಬಿಸಾಕಿದ್ದೇನೆ ಎಂಬ ಶಿಕ್ಷಣ ಸಚಿವರ ಉದ್ಧಟತನದ ಮಾತನ್ನು ಖಂಡಿಸಲು ಬಿಜೆಪಿ ಯುವ ಮೋರ್ಚಾ ಕಾರ್ಯ ಕರ್ತರು ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದ್ದರು ಎಂದರು.
ಆದರೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಮಾತ್ರ ಪೊಲೀ ಸರು ದೂರು ದಾಖಲಿಸಿದ್ದಾರೆ. ಎನ್.ಎಸ್.ಯು.ಐ. ಕಾರ್ಯಕರ್ತರ ಮೇಲೆ ದೂರು ದಾಖಲಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬುದು ಬಿಜೆಪಿ ಮುಖಂಡರ ಆರೋಪವಾಗಿದೆ.

ಸಾಗರದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಗಡಿಪಾರಿಗೆ ಶಿಫಾರಸು ಮಾಡಿ ಕೇವಲ ಮೂರು ಗಂಟೆ ಹಿಂದೆ ನೋಟಿಸ್ ನೀಡಿ ಆಮೇಲೆ ಠಾಣೆಗೆ ಬರಲಿಲ್ಲವೆಂದು ಇನ್ನೊಂದು ಕೇಸ್ ದಾಖಲಿಸುವ ಹುನ್ನಾರ ನಡೆಯುತ್ತಿದೆ. ಸೇಡಿನ ರಾಜಕಾರಣ ಮಾಡಲು ಕಾಂಗ್ರೆಸ್ ಹೊರಟಿದ್ದು, ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದ ಬಿಜೆಪಿ ಕಾರ್ಯಕರ್ತರ ಮೇಲೆ ವಿನಾಕಾರ ಕೇಸ್ ಹಾಕಲಾಗುತ್ತಿದೆ. ಹೀಗೆ ಮುಂದುವರೆದರೆ ಬಿಜೆಪಿ ದೊಡ್ಡ ಮಟ್ಟದ ಹೋರಾಟ ಕೈಗೊಳ್ಳಬೇಕಾಗು ತ್ತದೆ ಎಂದು ಶಾಸಕ ಹೆಚ್. ಹಾಲಪ್ಪ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಈ ರೀತಿಯ ಪೊಲೀಸರ ಏಕ ಪಕ್ಷೀಯ ವರ್ತನೆ ಬಗ್ಗೆ ಕೂಲಂಕಷವಾಗಿ ವಿವರಣೆ ಪಡೆದು ಪರಿಶೀಲನೆ ನಡೆಸಿ ಬಳಿಕ ಕ್ರಮಕ್ಕೆ ಮುಂದಾಗಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಮಾತನಾಡಿ, ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ, ಸಚಿವರ ಸಭೆಗೆ ಅಡ್ಡಿಪಡಿಸಿದ ರೀತಿ ಸರಿಯಲ್ಲ, ರಾಜ್ಯಪಾ ಲರ ಘಟನೆ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಪಾಲರು ಪ್ರತಿಭಟನಾಕಾರರ ಜೊತೆಗೆ ಮಾತನಾಡಿ ಪೊಲೀಸ್ ಅಧಿಕಾರಿಗಳಿಗೆ ಯಾವ ರೀತಿಯ ನಿರ್ದೇಶನ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಎರಡೂ ಘಟನೆಗಳ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಚರ್ಚಿಸುತ್ತೇನೆ ಮತ್ತು ಜಯನಗರ ಠಾಣೆಯಲ್ಲಿ ಶಾಸಕರಿಗೆ ಅವಮಾನ ಮಾಡಿದ್ದರೆ ಈ ಬಗ್ಗೆ ಲಿಖಿತ ದೂರನ್ನು ಶಾಸಕರು ಕೊಟ್ಟರೆ ಅದರ ಬಗ್ಗೆಯೂ ತನಿಖೆ ನಡೆಸಲಾಗುವುದು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಎಸ್.ಪಿ. ಮಿಥುನ್ ಕುಮಾರ್ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕರು ಮತ್ತು ಮುಖಂಡರು ಪೊಲೀಸರ ಏಕಪಕ್ಷೀಯ ವರ್ತನೆ ಬಗ್ಗೆ ದೂರು ನೀಡಿದ್ದು, ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಎಸ್.ಪಿ. ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ರಾದ ಹೆಚ್. ಹಾಲಪ್ಪ, ಡಿ.ಎಸ್. ಅರುಣ್, ಎಸ್.ಎನ್. ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಎಂ.ಬಿ. ಭಾನುಪ್ರಕಾಶ್, ಗಿರೀಶ್ ಪಟೇಲ್, ಜ್ಯೋತಿಪ್ರಕಾಶ್, ಎಸ್. ದತ್ತಾತ್ರಿ, ಶಿವರಾಜ್, ಹೃಷಿಕೇಶ್ ಪೈ, ಶ್ರೀನಾಥ್, ರತ್ನಾಕರ್ ಶೆಣೈ, ಮಾಲತೇಶ್, ಸಂತೋಷ್ ಬಳ್ಳೆಕೆರೆ ಮೊದಲಾದವರಿದ್ದರು.