ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದಾಗಿ ಹೇಳಿರುವ ಅರಣ್ಯ ಸಚಿವರ ಹೇಳಿಕೆಯನ್ನು ಮಾಜಿ ಸಚಿವ ಹರತಾಳು ಹಾಲಪ್ಪ ತೀವ್ರವಾಗಿ ಖಂಡಿಸಿದ್ದಾರೆ.


ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯಿಂದ ಆಗುವ ಸಂಕಷ್ಟಗಳ ಬಗ್ಗೆ ವಿವಿಧ ಮಜಲುಗಳಲ್ಲಿ ಚರ್ಚೆ ನಡೆಸಲಾಗಿತ್ತು

. ಮಲೆನಾಡು ಭಾಗದಲ್ಲಿ ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂಬ ದೃಷ್ಟಿಯಿಂದ ವರದಿ ಜಾರಿಗೆ ತಡೆ ಹಿಡಿಯಲಾಗಿತ್ತ. ಮತತು ವರದಿ ಮಾರ್ಪಾಡು ಮಾಡಲು ಚಿಂತನೆ ನಡೆಸಲಾಗಿತ್ತು ಎಂದರು.


ಅರಣ್ಯ ಸಚಿವ ಕಸ್ತೂರಿ ರಂಗನ್ ವರದಿ ಬಗ್ಗೆ ಹೇಳಿಕೆ ನೀಡಿರುವುದು ಆತಂಕಕ್ಕೆ ಕಾರಣವಾಗಿದೆ. ಬಳಿಕ ಸಚಿವರಿಗೆ

ಈ ವಿಚಾರದ ಬಗ್ಗೆ ಗಮನಕ್ಕೆ ತಂದಾಗ ನಾನು ಆ ರೀತಿ ಹೇಳಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೂ ನಾನು ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರಕ್ಕೆ ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಒತ್ತಾಯಿಸುವುದಾಗಿ ಅವರು ತಿಳಿಸಿದರು.

By admin

ನಿಮ್ಮದೊಂದು ಉತ್ತರ

error: Content is protected !!