ಶಿವಮೊಗ್ಗ.ಅ.೨. ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ೨೦೨೨-೨೩ ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ & ದ್ವಿತೀಯ ಪಿಯುಸಿಯಲ್ಲಿ ಶೇ.೯೦ ಕ್ಕಿಂತ ಹೆಚ್ಚು ಅಂಕ, ಅಂತಿಮ

ಪದವಿ\ಇಂಜಿನಿಯರಿಂಗ್, ಅಂತಿಮ ಸ್ನಾತಕೋತ್ತರ ಪದವಿಗಳಲ್ಲಿ ಶೇ.೭೦ ಹಾಗೂ ವೈದ್ಯಕೀಯ, ಪದವಿಗಳಲ್ಲಿ ಶೇ.೬೦ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದ್ಯಸರ

ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚು ಅಂಕ ಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ನಿಗದಿತ ನಮೂನೆ

ಅರ್ಜಿಯನ್ನು ಸಂಘದಿಂದ ಪಡೆದು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ

. ಈ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣದಿಂದಲೂ ಸ್ವೀಕರಿಸಲಾಗುವುದಿಲ್ಲ. ಆಡಳಿತ ಮಂಡಲಿ ತೀರ್ಮಾನವೇ ಅಂತಿಮವಾಗಿರುತ್ತದೆಂದು ಸಂಘದ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.