ಶಿವಮೊಗ್ಗ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಅನುಷ್ಠಾನಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಇಂದು ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರೊಂದಿಗೆ ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಎಲ್ಲಾ ಮಹಿಳೆಯರು ಕೂಡ ಸರ್ಕಾರದ ಈ ಯೋಜನೆಗೆ ಹರ್ಷ ವ್ಯಕ್ತಪಡಿಸಿದ್ದಲ್ಲದೆ ನಮಗೆ ತುಂಬಾ ಅನುಕೂಲವಾಗಿದೆ. ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ. ಮುಂರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಯೋಜನೆ ಜಾರಿಗೊಳಿಸದೆ ನಿರಂತರವಾಗಿರಲಿ ಎಂದು ಆಗ್ರಹಿಸಿದರು.


ಪುರುಷ ಪ್ರಯಾಣಿಕರು ಯೋಜನೆ ಏನೋ ಸರಿ ಇದೆ ಆದರೆ ಕೆಲವೊಂದು ಬಹು ಬೇಡಿಕೆಯ ಮಾರ್ಗಗಗಲ್ಲಿ ವಿಪರೀತ ರಶ್ ಇರುತ್ತದೆ. ಸಂಜೆ ೪ರ ನಂತರ ೬ರ ವರೆಗೆ ಶಾಲಾಕಾಲೇಜು ಮಕ್ಕಳಿಗೆ ಜಾಗವಿರುವುದಿಲ್ಲ. ಆ ಸಮಯದಲ್ಲಿ ಹೆಚ್ಚುವರಿ ಬಸ್ ಓಡಿಸುವಂತೆ ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಕೆ.ಎಸ್.ಆರ್.ಟಿ.ಸಿ ಸಂಚಾಲನಾ ಅಧಿಕಾರಿ ದಿನೇಶ್ ಅವರಿಗೆ ನಾಗರಿಕರಿಗೆ ತೊಂದರೆ ಆಗದ ರೀತಿಯಲ್ಲಿ ಯಾವುದೇ ಅಪಸ್ವರ ಬರದಂತೆ ಯೋಜನೆಯನ್ನು ಜಾರಿಗೊಳಿಸಿ ಎಂದು ಮನವಿ ಮಾಡಿದರು.


ಹಲವು ಬಸ್‌ಗಳಲ್ಲಿ ಹತ್ತಿ ಪ್ರಯಾಣಿಕರೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ ಸರ್ಕಾರದ ಯೋಜನೆ. ನಾಲ್ಕು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಬಡವರ ಪರವಾಗಿರುತ್ತದೆ. ಯುವಕರಿಗೆ ಕೂಡ ನಿರುದ್ಯೋಗಿ ವೇತನ ನೀಡಲಾಗುತ್ತದೆ. ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಸ್ಟೆಲ್ ನಿರ್ಮಾಣ, ಉಚಿತ ವಿದ್ಯಾಭ್ಯಾಸ, ಸ್ಕಾಲರ್‌ಶಿಪ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಬಿಜೆಪಿಯ ಸುಳ್ಳುಗಳನ್ನು ನಂಬಬೇಡಿ. ಅಪಪ್ರಚಾರ ಮಾಡುವುದೇ ಅವರ ಕೆಲಸ. ಬಡವರ ಪರ ಯೋಜನೆಗಳನ್ನು ತಂದ ಕಾಂಗ್ರೆಸ್ ಸರ್ಕಾರವನ್ನು ಸದಾ ಬೆಂಬಲಿಸಿ ಎಂದರು.


ಈ ಸಂದರ್ಭದಲ್ಲಿ ಯಮುನಾ ರಂಗೇಗೌಡ, ಚಂದ್ರಭೂಪಾಲ್, ಎನ್.ಡಿ. ಪ್ರವೀಣ್‌ಕುಮಾರ್, ಸ್ಟೆಲ್ಲಾ ಮಾರ್ಟಿನ್, ವಿಜಯಲಕ್ಷ್ಮಿ ಪಾಟೀಲ್, ಸುವರ್ಣಾ ನಾಗರಾಜ್, ಮೇಹಕ್ ಶರೀಫ್, ನಾಜೀಮಾ, ಪ್ರೇಮಾ ಎನ್. ಶೆಟ್ಟಿ, ಅರ್ಚನಾ, ಡಿಟಿಒ ದಿನೇಶ್, ಸೇರಿದಂತೆ ಹಲವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!