ಶಿವಮೊಗ್ಗ, ಆ.12:
ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಲ್ಲಿ ಇಡೀ ರಾಜ್ಯಾದ್ಯಾಂತ ದಿ: 09.09,2023 ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ನಡೆಸಲುದ್ದೇಶಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳನ್ನು ಒಳಗೊಂಡಂತೆ ಎಲ್ಲಾ ನ್ಯಾಯಾಲಯಗಳಲ್ಲೂ ಏಕ ಕಾಲದಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.
ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನಗಳ, ಕೌಟುಂಬಿಕ, ಭೂ ಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೊಂದಣಿ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯ ಪೂರ್ವ ಬ್ಯಾಂಕು ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಇದ್ದು, ಸಂಬಂಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯಾರ್ಥ ಪಡಿಸಿಕೊಳ್ಳಬಹುದಾಗಿದ್ದು ಇದರ ಸದುಪಯೋಗ ಕಕ್ಷಿಗಾರರು ಪಡೆಯ ಬಹುದಾಗಿದೆ.
ರಾಜೀ ಪ್ರಕ್ರಿಯೆಯಿಂದ ಸಮಯ ಮತ್ತು ಹಣವನ್ನು ಉಳಿಸಬಹುದಾಗಿದೆ ಹಾಗೂ ಉಭಯ ಪಕ್ಷಗಾರರ ನಡುವಿನ ಬಾಂಧವ್ಯವು ವೃದ್ಧಿಸುವುದು. ಆದುದರಿಂದ ಕಕ್ಷಿಗಾರರು ಲೋಕ ಅದಾಲತ್‍ನಲ್ಲಿ ಪಾಲ್ಗೊಳುವ ಮೂಲಕ ಅನುಕೂಲವನ್ನು ಪಡೆಯುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎನ್. ಚಂದನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಿ:11/02/2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸಂಚಾರಿ ಇ -ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯತಿ ನೀಡಿ ಸರ್ಕಾರವು ಆದೇಶ ಹೊರಡಿಸಿರುತ್ತದೆ. ಈ ರೀತಿಯು ದಿ:09/09/2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ.