ಶಿವಮೊಗ್ಗ, ಆಗಸ್ಟ್ 17,
      ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಮದ ನಿಯೋಜಿಸಲ್ಪಟ್ಟ

ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ.
      ಆಸಕ್ತ ಕ್ರೀಡಾಪಟುಗಳು 2022-23 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ

ನಮುನೆ ಹಾಗೂ ಮಾರ್ಗಸೂಚಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಈ ಕಚೇರಿಯಲ್ಲಿ ಪಡೆದು ದಿ: 25-09-2023 ರೊಳಗಾಗಿ ಸಲ್ಲಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!