ಶಿವಮೊಗ್ಗ: ಸ್ವತಂತ್ರ ಭಾರತ ೭೭ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಈ ಶುಭ ಸಂದರ್ಭದಲ್ಲಿ ಮುಂದಿನ ಐದು ವ?ಗಳು ಶಿವಮೊಗ್ಗ ನಗರ ಹೇಗಿರಬೇಕು ಎಂಬ ಚಿಂತನೆಯೊಂದಿಗೆ ೧೫ ದಿನಗಳ ಕಾಲ ಶಿವಮೊಗ್ಗ ನಗರದ ನಾಗರೀಕರಿಂದ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರೊಂದಿಗೆ ಚಾಲನೆ ನೀಡಿದರು.


ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಪಡೆ ನೀವು ನೀಡಿದ ಸಲಹೆಗಳನ್ನು ಅನುಷ್ಠಾನಗೊಳಿಸುವಲ್ಲಿ ನೆರವು ನೀಡಲಿದೆ. ಸಂಬಂಧಪಟ್ಟ ಇಲಾಖೆ ಜೊತೆಗೆ ಶಾಸಕರ ನೇತೃತ್ವದಲ್ಲಿ ಸರ್ಕಾರದ ಗಮನ ಸೆಳೆದು ಹೆಚ್ಚಿನ ಮುತುವರ್ಜಿ ವಹಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಪ್ರಯತ್ನಿಸುತ್ತಾರೆ. ಸಾರ್ವಜನಿಕರು ಕೂಡ ತಮ್ಮ ಸಮಸ್ಯೆ ಬಗೆಹರಿದ ಕೂಡಲೇ ಅದನ್ನು ಮಾಧ್ಯಮಗಳ ಮೂಲಕ ಬೆಳಕಿಗೆ ತನ್ನಿ. ಇದರಿಂದ ಉಳಿದವರಿಗೂ ತಮ್ಮ ನಗರ ಮತ್ತು ವಠಾರದ ಸಮಸ್ಯೆ ಬಗೆಹರಿಸಲು ಅನುಕೂಲವಾಗುತ್ತದೆ ಎಂದರು.


ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಈ ಕರ್ತವ್ಯ ಪಡೆಯಲ್ಲಿ ಇಂಜಿನಿಯರ್, ವೈದ್ಯರು, ವಿಷಯತಜ್ಞರು ಇರುತ್ತಾರೆ. ನಮ್ಮ ನಗರ ಸುಸಜ್ಜಿತ, ಸುಂದರ ಮತ್ತು ಮೂಲಭೂತ ಸೌಲಭ್ಯಗಳು ಲಭ್ಯವಾಗುವ ರೀತಿಯಲ್ಲಿ ಎಲ್ಲರೂ ಕೈ ಜೋಡಿಸೋಣ. ಇದಕ್ಕೆ ನಾಗರಿಕರ ಸಹಕಾರ ಅತಿ ಮುಖ್ಯ ಎಂದರು.


ಈ ಅಭಿಯಾನವು ಇಂದಿನಿಂದ ಆ.೩೧ರವರೆಗೆ ನಡೆಯುತ್ತದೆ. ಇದರ ಭಾಗವಾಗಿ ಶಿವಮೊಗ್ಗ ನಗರದ ೩೫ ವಾರ್ಡ್‌ಗಳು ಹಾಗೂ ೫೦ ಪ್ರಮುಖ ಸ್ಥಳಗಳಲ್ಲಿ ಸಲಹಾ ಪೆಟ್ಟಿಗೆಯನ್ನಿಡಲಾಗುತ್ತದೆ. ನಿಮ್ಮ ಸಲಹೆಗಳು ಶಿವಮೊಗ್ಗವನ್ನು ಸ್ಮಾರ್ಟ್ ಮಾಡುವಲ್ಲಿ ಸಹಕಾರಿಯಾಗುತ್ತದೆ. ನಗರದ ನಾಗರಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ವಿನಂತಿಸಿದರು.


ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್‌ಶಿವಕುಮಾರ್, ಉಪಮೇಯರ್ ಲಕ್ಷ್ಮೀಶಂಕರ ನಾಯಕ್, ಬಿಜೆಪಿ ನಗರ ಅಧ್ಯಕ್ಷ ಜಗದೀಶ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

By admin

ನಿಮ್ಮದೊಂದು ಉತ್ತರ

error: Content is protected !!