ಶಿವಮೊಗ್ಗ, ಆಗಸ್ಟ್ 29,
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.30 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.


    ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ನೆರವೇರಿಸುವರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹಾಗೂ ಯೋಜನೆ ಮತ್ತು

ಸಾಂಖ್ಯಿಕ ಇಲಾಖೆ ಸಚಿವರು ಮತ್ತು ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.


 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ(ಚೆನ್ನಿ) ಅವರು ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು,

ಮಹಾನಗರಪಾಲಿಕೆ ಮಹಾಪೌರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ.ಸಿಇಓ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು, ಅಧಿಕಾರಿಗಳು ಪಾಲ್ಗೊಳ್ಳುವರು.

By admin

ನಿಮ್ಮದೊಂದು ಉತ್ತರ

You missed

error: Content is protected !!