ನಾಡಹಬ್ಬ ಮೈಸೂರು ದಸರಾ ೨೦೨೩ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ
ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ
ಗಜಪಯಣಕ್ಕೆ ಚಾಲನೆ ನೀಡಲಾಯಿತು.
ಅಭಿಮನ್ಯು, ಭೀಮ, ಗೋಪಿ, ಧನಂಜಯ, ವರಲಕ್ಷ್ಮಿ, ಅರ್ಜುನ, ವಿಜಯ, ಮಹೇಂದ್ರ, ಕಂಜನ್ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು.
ಕಲಾ ತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ
ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು. ಸುತ್ತ-ಮುತ್ತಲಿನ ಗ್ರಾಮಗಳ ಮತ್ತು ಹಾಡಿಗಳ ನೂರಾರು ಮಹಿಳೆಯರು ಗಜಪಡೆಗೆ ಪೂರ್ಣಕುಂಭ ಸ್ವಾಗತ ಕೋರಿದರು.