ಪ್ರತೀ ದಿನ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಮುಖಂಡರು ಬಾರುಕೋಲು ಚಳುವಳಿ ಆರಂಭಿಸಿದರು.


ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ ಮುಖಂಡ ಕೆ.ಎಸ್ ನಂಜುಂಡೇಗೌಡ ಹಾಗೂ ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ

ಬಲ್ಲೆನಹಳ್ಳಿ ನೇತೃತ್ವದಲ್ಲಿ ಮೈಸೂರು ಬೆಂಗಳೂರು ಹೆದ್ದಾರಿಯ ಪಟ್ಟಣದ ಕುವೆಂಪು ವೃತ್ತದಲ್ಲಿ ಸಮಿತಿ ಮುಖಂಡರು ಜಮಾಯಿಸಿ ಬಾರು

ಕೋಲು ಹಿಡಿದು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.


ಪಟ್ಟಣದ ಮುಖ್ಯ ಬೀದಿಯಲ್ಲಿ ಬಾರುಕೋಲು ಹಿಡಿದು ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದರು. ಮುಖಂಡರಾದ ಮಹದೇವು, ಕೃಷ್ಣ, ಸೇರಿದಂತೆ ಇತರರು ಇದ್ದರು. ಪೋಲೀಸರು ಬಿಗಿ ಭದ್ರತೆ ವಹಿಸಿದರು.

By admin

ನಿಮ್ಮದೊಂದು ಉತ್ತರ

You missed

error: Content is protected !!