ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.
೨೦೨೨-೨೩ನೇ ಸಾಲಿನಲ್ಲಿ ವ್ಯಾಸಂಗ ಮಾಡು ತ್ತಿರುವ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಈ ಮೂರೂ ಇಲಾಖೆಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ.
ದರ ಜೊತೆಗೆ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೂ ಸಾವಿರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ ರಾಜ್ಯದಲ್ಲಿ ಯಾವ ವಿದ್ಯಾರ್ಥಿಗೂ ಕೂಡ ಇನ್ನೂ ವೇತನ ಸಿಕ್ಕಿಲ್ಲ ಎಂದು ಮನವಿದಾರರು ಆರೋಪಿಸಿದರು.
ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಆರ್ಥಿಕವಾಗಿ ಉಪಯೋಗವಾಗುತ್ತಿದ್ದ ಈ ವೇತನ ಇನ್ನೂ ಸಿಗದಿರು ವುದು ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಆದ್ದರಿಂದ ಸರ್ಕಾರ ತಕ್ಷಣವೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ವಿಧಾತ್ರಿ ಹೆಬ್ಬಾರ್, ಪ್ರಮುಖರಾದ ಪ್ರವೀಣ್, ಶರಣ, ಅಭಿಷೇಕ್, ಪುನೀತ್, ಯಶಸ್ವಿನಿ, ಧರಣಿ, ಅಶ್ವತ್, ಅರುಣ್, ಕಾರ್ತಿಕ್, ರಘುನಂದನ್, ಸಚಿನ್ ಲೋಹಿತ್, ಸಿಂಚನ ಸೇರಿದಂತೆ ಹಲವರಿದ್ದರು.