ಶಿವಮೊಗ್ಗ, ಸೆಪ್ಟೆಂಬರ್,05
     ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15-09-2023 ರವರೆಗೆ

ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.


     ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!