ಶಿವಮೊಗ್ಗ, ಸೆ.10:
ಕೆಲಸದ ಒತ್ತಡದಲ್ಲಿ ಮಕ್ಕಳ ವಿಧ್ಯಾಭ್ಯಾಸ ನೋಡಿಕೊಳ್ಳಲಾಗದ ಇಂದಿನ ದಿನಮಾನಗಳಲ್ಲಿ ಶಿವಮೊಗ್ಗ ಸರ್ಕಾರಿ ನೌಕರರ ಮಕ್ಕಳ ಸಾಧನೆ ಶ್ಲಾಘನೀಯವಾದುದು. ಇದಕ್ಕೆ ಪೂರಕವಾಗಿ ಶಿವಮೊಗ್ಗ ಸರ್ಕಾರಿ ನೌಕರರ ಸಂಘ ಪ್ರತಿಭಾ ಪುರಸ್ಕಾರ ಆಯೋಜಿಸುತ್ತಿರುವದು ಅರ್ಥಗರ್ಭಿತ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದರು.
ಶಿವಮೊಗ್ಗ ಪೇಸ್ ಕಾಲೇಜಿನ ಆವರಣದಲ್ಲಿ ಇರುವ ಜಯಲಕ್ಷ್ಮಿ ಕನ್ವೇಷನ್ ಹಾಲ್ ನಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘವು ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ., ಹಾಗೂ ಕರ್ನಾಟಕ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ.,ಸಹಯೋಗದೊಂದಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಸ್ನೇಹಲ್ ಲೋಖಂಡೆ ಅವರು ಮಾತನಾಡುತ್ತಾ ಸಾಧಕ ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳು ಕರೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ಮಾತನಾಡುತ್ತಾ, ಇಡೀ ರಾಜ್ಯದಲ್ಲಿ ಯಾವ ಸಂಘ ಸಂಸ್ಥೆಯೂ ಮಾಡದ ಇಂತಹ ಪ್ರತಿಭಾ ಪುರಸ್ಕಾರವನ್ನು ನಮ್ಮ ಸಂಘ ರೂಪಿಸಿದೆ.
ರಾಜ್ಯದ ಸಾವಿರಾರು ಮಕ್ಕಳನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ ಎಂದರು.
ಮಕ್ಕಳು ಸಂಸ್ಕೃತಿಯನ್ನು ರೂಪಿಸಬೇಕಿದೆ. ತಂದೆ ತಾಯಿಯರನ್ನು ಗೌರವಿಸಿ ಮುಂದೆ ಸಾಕುವ ಜವಾಬ್ಧಾರಿ ನಿಮ್ಮ ಮೇಲಿದೆ ಎಂಬುದನ್ನು ಮರೆಯದಿರಿ.
ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಸಂಪನ್ಮೂಲ ಹೊಂದಿರುವ ಜಿಲ್ಲೆಯೇ ಮೊದಲ ಸ್ಥಾನದಲ್ಲಿದೆ. ಇಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ 400 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಎನ್ ಪಿಎಸ್ ಓಪಿಎಸ್ ಮಾಡುವ ನಿಟ್ಟಿನಲ್ಲಿ ನಾವು ಗೆದ್ದೆ ಗೆಲ್ಲುತ್ತೇವೆ ಎಂದರು.
ಸಂಘದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.