Photo ನೋಡಿ ಕ್ಲಿಕ್ ಮಾಡಿ
ಶಿವಮೊಗ್ಗ, ಸೆ.11
ಮುಂಬರುವ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗಿನ ಜಾವ ಮಿಥುನ್ ಕುಮಾರ್ ಜಿ.ಕೆ. ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ, ಶಿವಮೊಗ್ಗ ಎ ಉಪ ವಿಭಾಗದಲ್ಲಿ ಬಾಲರಾಜ್, ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ ಸುರೇಶ್ ಎಂ, ಪೊಲೀಸ್ ಉಪಾಧಿಕ್ಷಕರು, ಭದ್ರಾವತಿ ಉಪ ವಿಭಾಗದಲ್ಲಿ ನಾಗರಾಜ್, ಪೊಲೀಸ್ ಉಪಾಧಿಕ್ಷಕರು, ಸಾಗರ ಉಪ ವಿಭಾಗದಲ್ಲಿ, ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, ಪೊಲೀಸ್ ಉಪಾಧಿಕ್ಷಕರು, ಶಿಕಾರಿಪುರ ಉಪ ವಿಭಾಗದಲ್ಲಿ ಶಿವಾನಂದ್ ಮದರಖಂಡಿ, ಪೊಲೀಸ್ ಉಪಾಧಿಕ್ಷಕರು ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಗಜಾನನ ವಾಮನ ಸುತಾರ, ಪೊಲೀಸ್ ಉಪಾಧಿಕ್ಷಕರು ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂಧಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಏಕಕಾಲದಲ್ಲಿ ಇಂದು ಮುಂಜಾನೆಯಿಂದಲೇ ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ ಮಾಡಿತು.
ಶಿವಮೊಗ್ಗ ಎ ಉಪ ವಿಭಾಗದಲ್ಲಿ – 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ – 38, ಭದ್ರಾವತಿ ಉಪ ವಿಭಾಗದಲ್ಲಿ – 72, ಸಾಗರ ಉಪ ವಿಭಾಗದಲ್ಲಿ – 21, ಶಿಕಾರಿಪುರ ಉಪ ವಿಭಾಗದಲ್ಲಿ – 27, ತೀರ್ಥಹಳ್ಳಿ ಉಪ ವಿವಭಾಗದಲ್ಲಿ – 44 ಸೇರಿ ಜಿಲ್ಲೆಯಾದ್ಯಂತ ಒಟ್ಟು 241 ರೌಡಿ ಆಸಾಮಿಗಳ ಮನೆಗಳನ್ನು ತಪಾಸಣೆ ನಡೆಸಿ ರೌಡಿ ಆಸಾಮಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲಿಸಿ, ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಕೋಮು ಸೌಹಾರ್ದತೆಗೆ ದಕ್ಕೆತರುವಂತಹ / ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಗಿರುತ್ತದೆ.