ಶಿವಮೊಗ್ಗ, ಸೆಪ್ಟಂಬರ್ 12

ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ೨೦೨೩-೨೪ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ಆ.೧೦ ರಿಂದ ನೀರು ಹರಿಸಲಾಗುತ್ತಿದ್ದು, ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದಿರುವುದರಿಂದ ಈ ಅವಧಿಯ ಬೆಳೆಗಳಿಗೆ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಿ, ಗರಿಷ್ಠ ಪ್ರಮಾಣ ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.


ಮುಖ್ಯವಾಗಿ, ಭದ್ರಾ ಜಲಾಶಯದ ಇತಿಹಾಸದಲ್ಲಿಯೇ ೧೯೬೨ ರಿಂದ ಇಲ್ಲಿಯವರೆಗೆ ಆಗಸ್ಟ್ ತಿಂಗಳಿನಲ್ಲಿ ಒಳಹರಿವಿನ ಪ್ರಮಾಣ ಅತ್ಯಂತ ಕನಿಷ್ಠ ಮಟ್ಟದ್ದಾಗಿದ್ದು, ಜಲಾಶಯದಲ್ಲಿ ನೀರಿನ ಸಂಗ್ರಹವು ಕಡಿಮೆಯಾಗಿರುತ್ತದೆ.

ಬೇಸಿಗೆ ಅವಧಿಯಲ್ಲಿ ಹೆಚ್ಚಿನ ಪ್ರಮಾಣದ ಕುಡಿಯುವ ನೀರಿನ ಬೇಡಿಕೆ ಬರುತ್ತದೆ. ಬೇಸಿಗೆ ಅವಧಿಯಲ್ಲಿ ಬೆಳೆದು ನಿಂತಿರುವ ತೋಟಗಾರಿಕೆ ಮತ್ತು ಇತರೆ ಬೆಲೆಗಳಿಗೆ ನೀರನ್ನು ಕಾಯ್ದಿರಿಸಬೇಕಾಗಿದ್ದು, ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚು ನೀರುಣ್ಣುವ ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆಯದಂತೆ ಸೂಚಿಸಲಾಗಿದೆ.


ಈಗಲೂ ಭತ್ತದ ನಾಟಿ ಕಾರ್ಯ ಮಾಡುತ್ತಿರುವ ಬಗ್ಗೆ ಮಾಹಿತಿ ಇದ್ದು, ತಕ್ಷಣವೇ ನಿಲ್ಲಿಸಲು ಹಾಗೂ ಭತ್ತ ನಾಟಿ ಮಾಡಿ ನೀರಿಲ್ಲದೆ ಬೆಳೆ ನಾಶವಾದರೆ ಇಲಾಖೆಯು ಜವಾಬ್ಧಾರಿಯಾಗುವುದಿಲ್ಲ. ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭ.ಯೋ,ನೀ.ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


೨೦೨೩-೨೪ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಮುಂಗಾರು ಅವಧಿಯಲ್ಲಿ ಅರೆ ನೀರಾವರಿ ಬೆಳೆಗಳಿಗೆ ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಜಲಾಶಯದಿಂದ ನೀರಿನ ಸಂಗ್ರಹಕ್ಕೆ

ಅನುಗುಣವಾಗಿ ನಾಲೆಗಳಲ್ಲಿ ನೀರನ್ನು ಹರಿಸಲಾಗುವುದು ಎಂದು ಅವರು ತಿಳಿಸಿರುತ್ತಾರೆ.

By admin

ನಿಮ್ಮದೊಂದು ಉತ್ತರ

error: Content is protected !!