ಶಿವಮೊಗ್ಗ, ಸೆಪ್ಟೆಂಬರ್ ೧೩,
ಶಿವಮೊಗ್ಗ ಮೀನುಗಾರಿಕೆ ಇಲಾಖೆ ವತಿಯಿಂದ ೨೦೨೩+೨೪ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಮಾಡುವವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ,
ಮೀನು ಮಾರಾಟಕ್ಕಾಗಿ ರೆಫ್ರಿಜಿರೇಟೆಡ್ ವಾಹನ ಖರೀದಿಗೆ ಸಹಾಯ ಮತ್ತು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನ ಘಟಕಗಳ ಉಪಯೋಜನೆಯಗಳನ್ನು
ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.೪೦ ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.೬೦ ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.೨೫ ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.