ಸಾಗರ : ತಾಲ್ಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಇಬ್ಬರು ಅಧಿಕಾರಿಗಳು ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.


ಸಾಗರದ ಕೃಷಿ ಇಲಾಖೆಯ ತಾಂತ್ರಿಕ ವಿಭಾಗದ ಅಧಿಕಾರಿ ಕೃಷ್ಣಕುಮಾರ್ ಕೆ.ಟಿ. (೩೬) ಮತ್ತು ಎಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗಿ ಅರುಣ್ (೨೮) ಎಂಬುವವರು ಭಾನುವಾರ ಕುಟುಂಬ ಸಮೇತ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ ಊಟ ಮುಗಿದ ನಂತರ ಕೃಷ್ಣಕುಮಾರ್ ಮತ್ತು ಅರುಣ್ ಈಜಲು ನೀರಿಗೆ ಇಳಿದಿದ್ದಾರೆ.


ದೇವಿಗುಂಡಿ ಬಳಿ ನೀರಿನ ಹರಿವು ಹೆಚ್ಚಿರುವ ಕಾರಣ ಇಬ್ಬರೂ ನೀರು ಪಾಲಾಗಿದ್ದಾರೆ. ಕಾರ್ಗಲ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಹೊಳೆಬಸಪ್ಪ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಶವವನ್ನು

ಮೇಲೆತ್ತಿ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಘಟನೆ ಸಂಬಂಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

By admin

ನಿಮ್ಮದೊಂದು ಉತ್ತರ

You missed

error: Content is protected !!