ಶಿವಮೊಗ್ಗ: ಚಿಕ್ಕಮಗಳೂರಿನ ಎವಿಎಸ್ ಶಿಕ್ಷಣ ಕಾಲೇಜು ಮತ್ತು ಕುವೆಂಪು ವಿಶ್ವವಿದ್ಯಾಲಯ ಬಿಎಡ್ ಕಾಲೇಜಿನ ಪ್ರಾಚಾರ್ಯರು ಮತ್ತು ಶಿಕ್ಷಕರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 30ಕ್ಕೆ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ “ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು” ವಿಷಯ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸೆ. 30ರ ಬೆಳಗ್ಗೆ 10ಕ್ಕೆ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ( ಆಡಳಿತ ) ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು “ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು” ವಿಷಯ ಕುರಿತ ಕಾರ್ಯಕ್ರಮ ಉದ್ಘಾಟಿಸುವರು. ಎವಿಎಸ್ ಶಿಕ್ಷಣ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಡಾ. ವೀರಣ್ಣ ಸಜ್ಜನ್ ಅಧ್ಯಕ್ಷತೆ ವಹಿಸುವರು.

ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ವಿಷ್ಣುಮೂರ್ತಿ ಕೆ.ಎ., ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ( ಪರೀಕ್ಷಾಂಗ ) ಪ್ರೊ. ಎಸ್.ಎಂ.ಗೋಪಿನಾಥ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ನಿವೃತ್ತ ಪ್ರಾಚಾರ್ಯ ಪ್ರೊ. ಪಂಚಾಕ್ಷರಯ್ಯ ಉಪಸ್ಥಿತರಿರುವರು.

ಕುವೆಂಪು ವಿಶ್ವವಿದ್ಯಾಲಯದ ಪಿಜಿ ಶಿಕ್ಷಣ ವಿಭಾಗದ ಡೀನ್ ಪ್ರೊ. ಜಗನ್ನಾಥ್ ಕೆ ಡಾಂಗೆ, ಪ್ರೊ. ಎಸ್.ಎಸ್.ಪಾಟೀಲ್, ಪ್ರೊ. ಗೀತಾ ಸಿ., ಎವಿಎಸ್ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಅಜೇಶ್ ವಿ.ಎಸ್. ಕುವೆಂಪು ವಿಶ್ವವಿದ್ಯಾಲಯ ಬಿಎಡ್ ಕಾಲೇಜಿನ ಪ್ರಾಚಾರ್ಯರು ಮತ್ತು ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಪರಮೇಶ್ವರಪ್ಪ ಎಚ್.ಎಂ. ಪಾಲ್ಗೊಳ್ಳುವರು.

ಸಮಾರೋಪ ಕಾರ್ಯಕ್ರಮ ಸಂಜೆ 4ಕ್ಕೆ ನಡೆಯಲಿದ್ದು, ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಅರ್ಜುನ್ ವಿ.ಎಸ್., ಡಾ. ಮಧು ಜಿ., ಸಂತೋಷ್‌ಕುಮಾರ್ ಎಂ.ಜೆ., ಎವಿಎಸ್ ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ್ ಮಟ್ಟಿಮನಿ ಮತ್ತಿತರರು ಉಪಸ್ಥಿತರಿರುವರು.

By admin

ನಿಮ್ಮದೊಂದು ಉತ್ತರ

error: Content is protected !!