ಶಿವಮೊಗ್ಗ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕನ್ನಡ ಪರ ಸಂಘಟನೆಗಳ ಒಕ್ಕೂಟ) ಇಂದು ನಗರದ ಬಸ್ ನಿಲ್ದಾಣದಿಂದ ಸೀನಪ್ಪಶೆಟ್ಟಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರತಿಕೃತಿ ದಹನ ಮಾಡಿದರು.


ನೆಹರು ರಸ್ತೆಯಲ್ಲಿ ವೇದಿಕೆಯ ಸದಸ್ಯರು ಅಂಗಡಿ ಬಂದ್ ಮಾಡುವಂತೆ ವ್ಯಾಪಾರಸ್ತರಲ್ಲಿ ವಿನಂತಿಸುತ್ತಾ ಮೆರವಣಿಗೆಯಲ್ಲಿ ಬಂದರು. ಆದರೆ ಕೆಲವು ವರ್ತಕರು ಬಂದ್‌ಗೆ ವಿರೋಧ ವ್ಯಕ್ತಪಡಿಸಿ, ಹೋರಾಟಕ್ಕೆ ನೈತಿ ಬೆಂಬಲ ಸೂಚಿಸಿದರು.


ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಬಲವಂತದ ಬಂದ್‌ಗೆ ಅವಕಾಶವಿಲ್ಲ ಎಂದು ಹೋರಾಟಗಾರರಿಗೆ ಎಚ್ಚರಿಕೆ ನೀಡಿದ ಘಟನೆಯೂ ನಡೆಯಿತು.


ರಾಜ್ಯದಲ್ಲಿ ಈ ಬಾರಿ ಮಳೆ ಆಗಿಲ್ಲ. ಬರಗಾಲ ತಾಂಡವವಾಡುತ್ತಿದೆ. ಕುಡಿಯುವ ನೀರಿಗೆ ತೊಂದರೆ ಇದೆ. ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದು ಶೋಚನೀಯ ಸಂಗತಿ. ರಾಜ್ಯ ಸರ್ಕಾರ ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಮಂಜು, ಅನಿಲ್, ಅಂಬರೀಶ್, ಮಧು, ಶೈಲೇಶ್, ವಿಜಯಕುಮಾರ್ ಮೊದಲಾದವರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!