ಶಿವಮೊಗ್ಗ ಹೊರವಲಯದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ತನಿಖೆಗಾಗಿ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ರಾಗಿಗುಡ್ಡಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.


ಅ.೧ ರಂದು ನಗರದ ರಾಗಿಗುಡ್ಡ ಬಳಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದರು

ಈ ಪ್ರಕರಣಕ್ಕೆ ಸಂಬಂ ಧಿಸಿ ದಾವಣಗೆರೆ ವಿಭಾಗದ ಡಿವೈಎಸ್ಪಿ ನಾಗೇಶ್ ಐತಾಳ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಅದರಂತೆ ಘಟನೆ ನಡೆದ ಪ್ರದೇಶಕ್ಕೆ ತಂಡ ಬಂದು ತನಿಖೆ ನಡೆಸುತ್ತಿದೆ, ಅಲ್ಲದೆ ಗಲಾಟೆಯಲ್ಲಿ ಯಾವುದಾದರೂ ಸಂಘಟನೆಯ

ಕೈವಾಡ ಇದೆಯಾ ಎಂಬ ಕುರಿತು ತನಿಖೆ ನಡೆಸುತ್ತಿದ್ದು, ಅಧಿಕಾರಿಗಳ ತಂಡ ಜಖಂಗೊಂಡಿರುವ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!