ಶಿವಮೊಗ್ಗ ಅಕ್ಟೋಬರ್ 05,
      ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


      ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.


     ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇತರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.


     ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.


     ಅರ್ಜಿ ಸಲ್ಲಿಸಲು ದಿ: 31-10-2023 ಕಡೆಯ ದಿನವಾಗಿದ್ದು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಹಾಗೂ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆಂದು ಡಿಬಿಸಿಡಿಸಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!