ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಅ.೧೨ರಂದು ಬೆಳಿಗ್ಗೆ ೧೧ ಗಂಟೆಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಾಡೈಸ್ ಬಳಿ ಪ್ರತಿಭಟನೆ ಹಾಗೂ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.
ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರ ಗಲಭೆಯನ್ನು ಇಡೀ ರಾಜ್ಯವೇ ನೋಡುತ್ತಿದೆ. ಘಟನಾವಳಿಗಳು ನಡೆಯುವ ಮುನ್ನ ಯಾವ ಮುಂಜಾಗ್ರತೆಯನ್ನೂ ವಹಿಸಲಿಲ್ಲ. ಘಟನೆಯ ನಂತರ ಸಚಿವರಾದ ಮಧು ಬಂಗಾರಪ್ಪ, ರಾಮಲಿಂಗಾರೆಡ್ಡಿ,. ಗೃಹಮಂತ್ರಿ ಪರಮೇಶ್ವರ್ ಸೇರಿದಂತೆ ಹಲವರು ಅಸಡ್ಡೆಯ ಹೇಳಿಕೆ ನೀಡಿದ್ದಾರೆ
. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ ರಾಗಿಗುಡ್ಡದಲ್ಲಿ ನಡೆದದ್ದೂ ಇದೇ. ಸರ್ಕಾರ ಓಲೈಕೆಯ ಸರ್ಕಾರವಾಗಿದೆ ಎಂದರು.
ರಾಗಿಗುಡ್ಡದಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವರು ಒಟ್ಟಾಗಿಯೇ ಇದ್ದರು. ಅನೇಕ ಹಿಂದೂಗಳು ಮುಸ್ಲಿಂರಿಗೆ ಮನೆ ಬಾಡಿಗೆಗೆ ನೀಡಿದ್ದಾರೆ. ಆದರೆ ಘಟನೆಯ ನಂತರ ಅವರ ನಡವಳಿಕೆಗಳೇ ಬದಲಾಗಿವೆ. ಬಿಜೆಪಿಯು ರಾಜ್ಯಧ್ಯಕ್ಷ ಕಟೀಲ್ ಸೇರಿದಂತೆ ಸ್ಥಳೀಯ ಮುಖಂಡರ ಜೊತೆಗೂಡಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕನೆ ಮಾಡಿದೆ. ಹಿಂದೂಗಳ ತಮ್ಮ ಆರ್ತನಾದವನ್ನು ಹೇಳಿಕೊಂಡಿದ್ದಾರೆ.
ಹೊರಗಡೆಯ ಶಕ್ತಿಗಳು ಇದಕ್ಕೆ ಕಾರಣವಾಗಿದೆ. ಈ ಎಲ್ಲಾ ಗಘಟನೆಗಳನ್ನು ಖಂಡಿಸಿ. ಅ.೧೨ರಂದು ಪ್ರತಿಭಟನೆ ಮತ್ತು ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಪ್ರತಿಭಟನಾ ಸಭೆಗೆ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ. ವಿಜಯೇಂದ್ರ, ಎಸ್.ಎನ್. ಚನ್ನಬಸ್ಪ ಸೇರಿದಂತೆ ಜಿಲ್ಲೆಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್. ದತ್ತಾತ್ರಿ, ಶಿವರಾಜ್, ಬಿ.ಕೆ. ಶ್ರೀನಾಥ್, ಹೃಷಿಕೇಶ್ ಪೈ, ಜಗದೀಶ್, ವಿಶ್ವಾಸ್, ಶಶಿಧರ್, ಕೆ.ವಿ. ಅಣ್ಣಪ್ಪ ಇದ್ದರು.