ಬೆಂಗಳೂರು : ತೀವ್ರ ಕೂತುಹಲ ಕೆರಳಿಸಿದ್ದ ರಾಜ್ಯದ ಗ್ರಾಮಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 22 ಮತ್ತು 27 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ 2 ಹಂತಗಳಲ್ಲಿ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದೆ. ರಾಜ್ಯದ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಘೋಷಣೆ ಮಾಡಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ.
ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕೋವಿಡ್-19 ನಿಯಮ ಕಡ್ಡಾಯ ಮಾಡಲಾಗಿದ್ದು, ಕೆಲವು ಕಡೆ ಮತದಾನಕ್ಕೆ ಇವಿಎಂ ಬಳಸಲು ನಿರ್ಧರಿಸಲಾಗಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!