ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ದಸರಾ ಮಹೋತ್ಸವದಲ್ಲಿ ರೈತ ದಸರಾ ಸಮಿತಿ ವತಿಯಿಂದ ಬರಗಾಲದ ಹಿನ್ನೆಲೆಯಲ್ಲಿ

ಅ.18ರಂದು ಅತ್ಯಂತ ಸರಳವಾಗಿ ರೈತ ದಸರಾವನ್ನು ಆಚರಿಸಲಾಗುವುದು ಎಂದು ಸಮಿತಿ ಅಧ್ಯಕ್ಷೆ ಮೆಹಖ್ ಷರೀಫ್‍ತಿಳಿಸಿದರು.

ಅವರು ಇಂದು ಪಾಲಿಕೆ ಸಂಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 9 ಗಂaಟೆಗೆ ಸೈನ್ಸ್ ಮೈದಾನದಿಂದ ಕುವೆಂಪು

ರಂಗಮಂದಿರದವರೆಗೆ ರೈತ ಜಾಥಾ ನಡೆಯಲಿದ್ದು, ಈ ಜಾಥಾದಲ್ಲಿ ಎತ್ತಿನಗಾಡಿ, ಟ್ರ್ಯಾಕ್ಟರ್, ಟಿಲ್ಲರ್ ಹಾಗೂ ರೈತರು ಭಾಗವಹಿಸಲಿದ್ದಾರೆ ಎಂದರು.

ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ಪ್ರಗತಿಪರ ರೈತ ಹಾಗೂ ಉದಯೋನ್ಮುಖ ಕೃಷಿ ಪಂಡಿತರಾದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೆ.ಆರ್. ಜ್ಞಾನೇಶ್ ಉದ್ಘಾಟಿಸಲಿದ್ದು

. ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಶಾಸಕಿ ಶಾರದಾ ಪೂರ್ಯಾ ನಾಯ್ಕ ಸನ್ಮಾನಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಶಿಮುಲ್ ಅಧ್ಯಕ್ಷ ಎಸ್.ಎನ್. ಶ್ರೀಪಾದ ರಾವ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಿ.ಸಿ. ಪೂರ್ಣಿಮಾ, ರಾಜ್ಯ ರೈತ ಸಂಘದ ಮುಖಂಡರಾದ ಹೆಚ್.ಆರ್.

ಬಸವರಾಜ್ಪಪ, ಕೆ.ಟಿ. ಗಂಗಾಧರ್, ಆಯುಕ್ತ ಕೆ. ಮಾಯಣ್ಣ ಗೌಡ ಹಾಗೂ ಪಾಲಿಕೆ ಸದಸ್ಯರ ಭಾಗವಹಿಸಲಿದ್ದು, ಮೇಯರ್ ಎಸ್. ಶಿವಕುಮಾರ್ ಆದ್ಯಕ್ಷತೆ ವಹಿಸಲಿದ್ದಾರೆ ಎಂದರು.

ಕೃಷಿ ಹಾಗೂ ಕೃಷಿಗೆ ಸಂಬಂಧಪಟ್ಟ ಇತರೆ ಇಲಾಖೆಗಳು ಹಾಗೂ ಶಿಮುಲ್ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು, ಕೃಷಿ ವಿವಿಯ ಅಧ್ಯಾಪಕರು, ವಿದ್ಯಾರ್ಥಿಗಳು, ಶಿವಮೊಗ್ಗ ನಗರದ ಎಲ್ಲಾ ಕಂಪೆನಿಗಳ ಟಿಲ್ಲರ್ ಮತ್ತು ಟ್ರ್ಯಾಕ್ಟರ್ ಮಾರಾಟಗಾರರ ಮಾಲೀಕರು ಸಹಕಾರ ನೀಡುತ್ತಿದ್ದಾರೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಸಮಿತಿಯ ಸದಸ್ಯ ಹೆಚ್.ಸಿ. ಯೋಗೇಶ್, ಅಧಿಕಾರಿ ನಾಗೇಂದ್ರ ಉಪಸ್ಥಿತರಿದ್ದರು. 

By admin

ನಿಮ್ಮದೊಂದು ಉತ್ತರ

error: Content is protected !!