ಶಿವಮೊಗ್ಗದಲ್ಲಿ ಗುರುವಾರ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ದೊಡ್ಡಪೇಟೆ, ತುಂಗಾ ನಗರ ಹಾಗೂ ಕೋಟೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಸಂಜೆ 6ರಿಂದ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಉಳಿದಂತೆ ನಗರದಾದ್ಯಂತ ಡಿ.5ರವರೆಗೆ ನಿಷೇದಾಜ್ಞೆ ಇರಲಿದೆ ಎಂದು ಎಸ್ಪಿ ಕೆ.ಎಂ. ಶಾಂತರಾಜ್ ತಿಳಿಸಿದ್ದಾರೆ.