ಅನುದಾನಿತ ಪಿಂಚಣಿ ವಂಚಿತ ನೌಕರರ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ನ.೫ರಂದು ಶಿವಮೊಗ್ಗದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಟಿ. ಹಿರೇಮಠ್ ಹೇಳಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶವು ನ.೫ರ ಬೆಳಿಗ್ಗೆ ೧೦-೩೦ಕ್ಕೆ ತೆವರಚಟ್ನ ಹಳ್ಳಿಯ ಪೇಸ್ ಕಾಲೇಜು ಆರವಣದಲ್ಲಿರುವ ಜಯಲಕ್ಷ್ಮಿ

ಈಶ್ವರಪ್ಪ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,

ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘ ವೇಂದ್ರ, ಹಾಗೂ ಶಾಸಕರು, ವಿಧಾನ ಪರಿಷತ್ ಸದ ಸ್ಯರು, ಮಾಜಿ ಸಂಸದ ಮತ್ತು ಸಚಿವರು, ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ರಾಜ್ಯ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಅನುದಾನಿತ ನೌಕ ರರ ಸಂಘದ ಪದಾಧಿಕಾರಿಗಳು ಈ ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ ಎಂದರು.


ರಾಜ್ಯ ಕಾರ್ಯದರ್ಶಿ ಎಂ.ಎಲ್. ಶಿವಕುಮಾರ್ ಮಾತನಾಡಿ, ೨೦೦೬ರ ಪೂರ್ವದಲ್ಲಿ ಮತ್ತು ನಂತರ ಸೇವೆ ಸಲ್ಲಿಸುತ್ತಿರುವ ನೌಕರರು ಪಿಂಚಣಿ ಇಲ್ಲದೆ ಕೆಲಸ ಮಾಡುತ್ತಿದ್ದಾರೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಸತೀಶ್ ಹಾಗೂ ಪದಾಧಿಕಾರಿಗಳಾದ ಎಂ. ರಮೇಶ್, ವಾಗೀಶ್, ಲಕ್ಷ್ಮಣ್ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!