ಕಲ್ಲು ಬಂಡೆಗಳಿಂದ ಕೂಡಿದ್ದ ಬೆಟ್ಟದ ಸ್ಥಳದಲ್ಲಿ ಆರಂಭಗೊಂಡ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ಹೊಸ ಮೆರಗು ತಂದ ಕೀರ್ತಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರಿಗೆ ಸಲ್ಲುತ್ತದೆ. ಪೂಜ್ಯರು 1973 ರಲ್ಲಿ ಆರಂಭಿಸಿದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಈಗ “50 ರ ಸುವರ್ಣ ಸಂಭ್ರಮವನ್ನು” ಆಚರಿಸುತ್ತಿದ್ದು, ಅದರ ಅಂಗವಾಗಿ ನಾಡಿನಾದ್ಯಂತ ವಿವಿಧ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ತಿಳಿಸಿದ್ದಾರೆ.

      ತನ್ನಿಮಿತ್ತ ಭದ್ರಾವತಿ ತಾಲ್ಲೂಕಿನ ಬಿ. ಆರ್.ಪಿ ಶಾಂತಿ ನಗರದಲ್ಲಿ ಬಿಜಿಎಸ್ ಕುವೆಂಪು ಶಾಲೆಯ ನೂತನ ಕಟ್ಟಡವನ್ನು ನಿರ್ಮಿಸಲಾಗಿದ್ದು ಅದನ್ನು ನವಂಬರ್ 5. 11. 2023 ರ ಸಂಜೆ 04 ಘಂಟೆಗೆ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

        ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

     ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ, ಭದ್ರಾವತಿ ಶಾಸಕರಾದ ಶ್ರೀ ಬಿ.ಕೆ.ಸಂಗಮೇಶ್ವರ, ನಾಡಿನ ಸಚಿವರು, ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ.ಇದೇ ಸಂಧರ್ಭದಲ್ಲಿ ಅಂದು ಸಂಜೆ “ಬಿಜಿಎಸ್ ಹಬ್ಬ ” ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.

    ನ.6 ರಂದು ಸಂಜೆ 5:30 ಗಂಟೆಗೆ ಭದ್ರಾವತಿಯ ಎಸ್. ಎ.ವಿ. ಕ್ರೀಡಾಂಗಣದಲ್ಲಿ “ಎಸ್ ಎ ವಿ ಉತ್ಸವ ” ಶಾಲಾ – ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ಅಂದು ಪರಮಪೂಜ್ಯ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭದ್ರಾವತಿ ನಗರ ಸಭೆಯ ಆಯುಕ್ತರಾದ ಹೆಚ್. ಎಂ. ಮನುಕುಮಾರ್, ಖ್ಯಾತ ಕನ್ನಡ ಚಲನಚಿತ್ರ ನಟರಾದ ಶ್ರೀ ದೊಡ್ಡಣ್ಣ, ವಿಶ್ವ ಒಕ್ಕಲಿಗ ಮಹಾವೇದಿಕೆಯ ಕಾರ್ಯದರ್ಶಿಯಾದ ಕೆ. ಆರ್.ರಂಗನಾಥ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಸರ್ವರನ್ನೂ ಶ್ರೀ ಮಠದ ವ್ಯವಸ್ಥಾಪಕರು ಸ್ವಾಗತಿಸಿದ್ದಾರೆ.

      ಮಾಧ್ಯಮದವರಿಗೆ ಸ್ವಾಗತ : ಮಾಧ್ಯಮದ ಎಲ್ಲರನ್ನು ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ರೂವಾರಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಸ್ವಾಗತಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!