ಮೈಸೂರಿನ ರಾಮಕೃಷ್ಣ ವಿದ್ಯಾಶಾಲಾದ ಸುವರ್ಣ ಮಹೋತ್ಸವದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಈ ವರ್ಷ ಇಡೀ ರಾಜ್ಯಾದ್ಯಂತ ೯ ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸಾಮಾನ್ಯ ಜ್ಞಾನ ಪರೀಕ್ಷೆಯನ್ನು ನ.೫ರಂದು ಆಯೋಜಿಸಲಾಗಿದೆ ಎಂದು ಹಳೆಯ

ವಿದ್ಯಾರ್ಥಿಗಳ ಸಂಘದ ಹಾಗೂ ಕಾರ್ಯಕ್ರಮದ ಆಯೋಜಕ ಹೆಚ್.ಆರ್. ಉಮೇಶ್ ಆರಾಧ್ಯ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೈಸೂರಿನ ಶ್ರೀ ರಾಮಕೃಷ್ಣ ಶಾಲೆ ದೇಶ ಮತ್ತು ವಿದೇಶ ಗಳಲ್ಲಿ ಪ್ರಸಿದ್ಧಿಯಾಗಿದೆ. ಈ ಶಾಲೆಯ ಸಂಸ್ಥಾಪಕರಾದ ಸ್ವಾಮಿ ಶಾಂಭವಾನಂದಜೀ ಮಹಾರಾಜ್ ಅವರ ಸ್ಮರಣಾರ್ಥವಾಗಿ ೯ ಮತ್ತು ೧೦ನೇ ತರಗತಿ ವಿದ್ಯಾರ್ಥಿ ಗಳಿಗೆ ಸಾಮಾನ್ಯ ಜ್ಞಾನ ಪರೀಕ್ಷೆ ಆಯೋಜಿಸಲಾಗಿದೆ. ಶಿವಮೊಗ್ಗದಲ್ಲಿ ಸಹ ಈ ಪರೀಕ್ಷೆ ನ.೫ರಂದು ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ಬೆಳಿಗ್ಗೆ ೯ರಿಂದ ೧೨ರ ವರೆಗೆ ನಡೆಯಲಿದೆ ಎಂದರು.


ಶಿವಮೊಗ್ಗ ನಗರದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಸುಮಾರು ೩೫ ಶಾಲೆಗಳ ೩೧೦ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷೆ ಮುಗಿದ ನಂತರ ಫಲಿತಾಂಶ ಪ್ರಕಟವಾಗಲಿದೆ. ೯ನೆ ತರಗತಿಯ ಮೂವರು ೧೦ನೇ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಗುವುದು. ಮೊದಲೆರಡು ಸ್ಥಾನ ಗಳಿಸಿದ ನಾಲ್ವರು ವಿದ್ಯಾರ್ಥಿಗಳು ಮೈಸೂರಿನ ಆಶ್ರಮ

ಶಾಲೆಯಲ್ಲಿ ಡಿಸೆಂಬರ್ ೩ರಂದು ನಡೆಯಲಿರುವ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸುವರು ಎಂದರು.
ಇಡೀ ರಾಜ್ಯದ ೯೧ ಕೇಂದ್ರಗಳಲ್ಲಿ ೭೩೧ ಶಾಲೆಯ ೧೬ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸುವುದು,

ಗಣಿತದ ಬಗ್ಗೆ ವಿಶೇಷ ಆಸಕ್ತಿ, ಕುತೂಹಲ ಮೂಡಿಸುವುದು, ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬರಿಸುವುದು ಇದರ ಉದ್ದೇಶವಾಗಿದೆ ಎಂದರು.

By admin

ನಿಮ್ಮದೊಂದು ಉತ್ತರ

You missed

error: Content is protected !!