ಶಿವಮೊಗ್ಗ,
ಶಿವಮೊಗ್ಗ, ನ.5:
ಶಿವಮೊಗ್ಗ ನಗರಷ್ಟೇ ಅಲ್ಲ, ಇಡೀ ಇಡೀ ಜಿಲ್ಲೆಯ ಜಾತ್ಯತೀತ ಜನತಾದಳ ಪಕ್ಷವನ್ನು ಉತ್ತುಂಗಕ್ಕೆ ಏರಿಸಿ, ತಾನು ಚುನಾವಣೆಯಲ್ಲಿ ಸೋತರೂ ಮೂವರು ಶಾಸಕರನ್ನು ಜಿಲ್ಲೆಯಲ್ಲಿ ಪಕ್ಷಕ್ಕಾಗಿ ತಂದಿದ್ದ ಜಿಲ್ಲಾ ಅಧ್ಯಕ್ಷ, ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಪ್ರಧಾನಿ ದೇವೇಗೌಡ ಅವರ ಆತ್ಮೀಯ, ಕುಟುಂಬಸ್ಥ ಎಂದೇ ಕರೆಸಿಕೊಳ್ಳುತ್ತಿದ್ದ, ಸರ್ವರ ಹಿತ ಬಯಸುವ ನೊಂದವರಿಗೆ ಸದಾ ನೆರಳಾಗುವ ಎಂ ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಇಂದು ನಗರಕ್ಕೆ ಬಂದಾಗ ಅವರ ಆಗಮನಕ್ಕೆ ಆತ್ಮೀಯರು ನೀಡಿದ ಸ್ವಾಗತ ನೋಡಿದಾಗ ಇಡೀ ಶಿವಮೊಗ್ಗ ನಗರ ಎಂ. ಶ್ರೀಕಾಂತ್ ಅವರ ಹವಾದಲ್ಲೇ ಕಾಣಿಸಿಕೊಂಡಿದ್ದು ವಿಶೇಷ.


ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಸೇರ್ಪಡೆ ಗೊಂಡು ಇಂದು ರಾಜದಾನಿಯಿಂದ ಬೆಂಬಲಿಗರೊಂದಿಗೆ ಶಿವಮೊಗ್ಗಕ್ಕೆ ಬಂದು ಸದಸ್ಯತ್ವ ಸ್ವೀಕಾರ ಮಾಡಲು ಕಾಂಗ್ರೆಸ್ ಕಚೇರಿಗೆ ಬಂದ ಎಂ. ಶ್ರೀಕಾಂತ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಎರಡು ಕ್ರೇನ್‌ಗಳಲ್ಲಿ ದೊಡ್ಡ ಹೂವಿನ ಹಾರ, ಸೇಬಿನ ಹಾರಗಳಿಂದ ಸ್ವಾಗತಿಸಲಾ ಯಿತು. ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನೂರಾರು ಜನರು ತೆರೆದ ಕಾರಿನಲ್ಲಿ ಬಂದ ಶ್ರೀಕಾಂತ್ ಪರವಾಗಿ ಜೈಕಾರ ಕೂಗಿದರು. ಮಹಿಳೆಯರ ಡೊಳ್ಳು ತಂಡದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನೂಕುನುಗ್ಗಲು ಉಂಟಾ ಯಿತು. ಶ್ರೀಕಾಂತ್ ಅವರೊಂದಿಗೆ ಕಾಂಗ್ರೆಸ್ ಸೇರಿದ ಅವರ ಬೆಂಬಲಿಗರು ಹರ್ಷೋ ದ್ಘಾರದಿಂದ ಸಂಭ್ರಮಿಸಿದರು.
ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಜಿಲ್ಲಾ ಮಾಜಿ ಅಧ್ಯಕ್ಷ ಎಂ. ಶ್ರೀಕಾಂತ್ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.


ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದು, ರಾಜ್ಯದ ಎಲ್ಲಾ ಪಕ್ಷಗಳ ಮಾಜಿ ಮತ್ತು ಹಾಲಿ ಶಾಸಕರು ಸೇರಿದಂತೆ ಪ್ರಮುಖ ನಾಯಕರು ಕಾಂಗ್ರೆಸ್‌ಗೆ ಬರುತ್ತಿದ್ದು, ದಿನೇದಿನೇ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಲಯುತವಾಗಿ ಬೆಳೆಯುತ್ತಿದೆ ಶ್ರೀಕಾಂತ್ ಸೇರ್ಪಡೆ ಜಿಲ್ಲೆಗಷ್ಟೆ ಅಲ್ಲ ರಾಜ್ಯಕ್ಕೆ ಇನ್ನಷ್ಟು ಬಲತಂದಿದೆ ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಧರ್ಮ ಮತ್ತು ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಾ ಕೋಮು ಗಲಭೆಗಳಿಗೆ ಕಾರಣವಾದ ಬಿಜೆಪಿಯನ್ನು ರಾಜ್ಯದ ಜನತೆ ಸಂಪೂರ್ಣವಾಗಿ ತಿರಸ್ಕರಿಸಿ ದ್ದಾರೆ. ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜ ನೆಗಳಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಸಂಪೂರ್ಣ ನಾಶದತ್ತ ಸಾಗಿದೆ. ಮೋದಿ ಸುಳ್ಳಿನ ಕಂತೆಯನ್ನು ಜನ ಅರಿತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು.


ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಎಂ. ಶ್ರೀಕಾಂತ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಿದೆ. ಸಾವಿರಾರು ಭಾಷೆ ಮತ್ತು ಸಂಸ್ಕೃತಿ, ಧರ್ಮ ಉಳ್ಳ ಈ ದೇಶವನ್ನು ಕಾಂಗ್ರೆಸ್ ಪಕ್ಷವು ಒಟ್ಟಾಗಿ ತೆಗೆದುಕೊಂಡು ಬಂದಿದೆ. ಬಡವರು ಹಿಂದುಳಿದ ವರ್ಗಗಳ ಆಶೋತ್ತರಗಳನ್ನು ಈಡೇರಿಸಿದೆ. ನಾವು ಸುಮ್ಮನೆ ಭಾಷಣ ಮಾಡುತ್ತಾ ಕುಳಿತರೆ ಆಗುವುದಿಲ್ಲ. ಪ್ರತಿಯೊಬ್ಬ ಮತದಾರನ ಮನೆ, ಮನ ತಲುಪಬೇಕು. ಅವರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಬೇಕು ಎಂದ ಅವರು, ನಮ್ಮ ಪಕ್ಷದ ಸಿದ್ದಾಂತ ಮತ್ತು ಧ್ಯೇಯಗಳನ್ನು ಮನವರಿಕೆ ಮಾಡ ಬೇಕು. ಆಗ ನಮ್ಮ ಮುಂದಿನ ಗೆಲುವಿಗೆ ಸುಲಭವಾಗುತ್ತದೆ. ಅನೇಕ ಪಕ್ಷದ ಮುಖಂಡರು ಸಾಗರೋಪಾದಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಂ ಶ್ರೀಕಾಂತ್ ಅಪಾರ ಜನ ಮನ್ನಣೆ ಗಳಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿ ರುವುದರಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದರು.
ಎಂ ಶ್ರೀಕಾಂತ್ ಅವರು ರಾಜಕೀಯದ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಡವರ ಪರ ತುಡಿತ ಹೊಂದಿದವರು. ಕಾರ್ಮಿಕ ವಲಯ, ಶ್ರಮಿಕ ವಲಯ ಹೇಗೆ ಎಲ್ಲರ ಏಳಿಗೆಗೂ ಶ್ರಮಿಸುವ ಮನೋಭಾವ ಹೊಂದಿದ್ದಾರೆ. ಅವರ ಪಕ್ಷ ಸೇರ್ಪಡೆಯಿಂದಾಗಿ ಕಾಂಗ್ರೆಸ್ಗೆ ಹೊಸ ಚೈತನ್ಯ ಸಿಗಲಿದೆ ಎಂದರು.


ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್, ಆರ್. ಪ್ರಸನ್ನಕುಮಾರ್, ಇಸ್ಮಾಯಿಲ್ ಖಾನ್, ಹೆಚ್.ಸಿ. ಯೋಗೇಶ್, ಆರ್.ಎಂ. ಮಂಜುನಾಥ ಗೌಡ, ಶಿವಕುಮಾರ್, ವೈ.ಹೆಚ್. ನಾಗರಾಜ್, ಎನ್. ರಮೇಶ್, ದೇವೇಂದ್ರಪ್ಪ, ಗಿರೀಶ್, ಕಲಿಂ ಪಾಶಾ, ವಿಶ್ವನಾಥ್‌ ಕಾಶಿ, ರಂಗನಾಥ್, ಹಾಗೂ ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪ ಡೆಗೊಂಡ ನಾಗರಾಜ್ ಕಂಕಾರಿ ಸೇರಿದಂತೆ ನೂರಾರು ಬೆಂಬಲಿಗರು ಇದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!