ಶಿವಮೊಗ್ಗ, ನವೆಂಬರ್ 09,
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ ಬೆಂಗಳೂರು ಹಾಗೂ ಜಿಲ್ಲಾ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ
ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ನ.16 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್ನ ಶ್ರೀ
ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.