ಶಿವಮೊಗ್ಗ, ನ.05:
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಮಾನ್ಯ ಜಲ ಸಂಪನ್ಮೂಲ ಸಚಿವರಾದ ಸನ್ಮಾನ್ಯ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ನಂತರ ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರಚಿಸಿರುವ ಸುಮಾರು 400ಕೋಟಿ ರೂಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ ರೈತರಿಂದ ಬಂದಂತಹ ಅರ್ಜಿಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ಗಮನ ಸೆಳೆದರು.
ಇದಕ್ಕೆ ಸೂಕ್ತವಾಗಿ ಪ್ರತಿಕ್ರಿಯಿಸಿದ ಸಚಿವರು ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಹಾಗೂ ಕೂಡಲೇ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದರು.
ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಂತೆ, ಹಲವಾರು ವರ್ಷಗಳಿಂದ ನೆನೆ ಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸುವಂತೆ, ಕಾಲುವೆಗಳನ್ನು ನಿರ್ಮಾಣ ಮಾಡಿಕೊಡುವಂತೆ, ಕಾಡ ಪ್ರಾಧಿಕಾರವನ್ನು ಮಾದರಿಯಾಗಿ ಮಾಡಲು, ರೈತರಿಗೆ ಸಾಕಷ್ಟು ರೀತಿಯಲ್ಲಿ ಅನುಕೂಲ ಮಾಡಿಕೊಡಲು ಮನವಿ ಸಲ್ಲಿಸಿದ ಕಾಡ ಅಧ್ಯಕ್ಷರು, ನಿಮ್ಮ ಎಲ್ಲಾ ರೀತಿಯ ಮನವಿಗಳನ್ನು ನಾನು ಆದ್ಯತೆ ಮೇರೆಗೆ ಕೈಗೊಳ್ಳಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೆಲ ಮತ್ತು ಜಲ ನಿರ್ವಹಣೆ ನಿರ್ದೇಶಕರಾದ ರಾಜೇಂದ್ರ ಪೋದ್ದರ್ ಅವರು, ಮಲಪ್ರಭಾ ನೀರು ಬಳಕೆದಾರರ ಮಹಾ ಮಂಡಲದ ಅಧ್ಯಕ್ಷರಾದ ಅಶೋಕ್ ಕಂದ್ರತ್ತಿ ಅವರು, ನೆಲ ಮತ್ತು ಜಲ ನಿರ್ವಹಣೆ ಸಿಬ್ಬಂದಿ ಸುರೇಶ್ ಕುಲಕರ್ಣಿ ಅವರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!