ಶಿವಮೊಗ್ಗ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಿಮಾನ ನಿಲ್ದಾಣದ 2ಹಂತದಕಾಮಗಾರಿಯು ಇನ್ನು ಒಂದು ವರ್ಷದ ಅವಧಿಯೊಳಗೆ ಮುಕ್ತಾಯಗೊಳ್ಳುತ್ತದೆ ಎಂದು ಇದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದರು.
ಅವರು ಇಂದು ರಾಜದಾನಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಮುಖ್ಯ ಇಂಜಿನಿಯರ್, ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಛೇರಿಗಳ ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 662.38ಎಕರೆ ಜಾಗದಲ್ಲಿ 220 ಕೋಟಿ ರೂಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ವಿಮಾನ ನಿಲ್ಧಾಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಉಡಾನ್ ಯೋಜನೆಯಡಿ ಕೈಗೆಟಕುವ ದರದಲ್ಲಿ ಜನಸಾಮಾನ್ಯರು ವಿಮಾನಯಾನ ಮಾಡುವ ಸದವಕಾಶವನ್ನು ಒದಗಿಸಲಿದೆ ಎಂದು ಹೇಳಿದರು.
ಈ ವಿಮಾನ ನಿಲ್ದಾಣವು ಶಿವಮೊಗ್ಗ ಹಾಗೂ ಸುತ್ತ ಮುತ್ತಲಿನ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಹಾಗೂ ಕೈಗಾರಿಕೋದ್ಯಮ ಮತ್ತು ಇತರೆ ಚಟುವಟಿಕೆಗಳು ಇನ್ನಷ್ಟು ಗರಿಗೆದರಲು ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣದ ಕಾಮಗಾರಿಯೂ ಗುಣಮಟ್ಟದಲ್ಲಿ ರಾಜಿ ಇಲ್ಲದೆ ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳ ಸೂಚಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ವಿಭಾಗ ಕಛೇರಿಯ ಅಡಿಯಲ್ಲಿ ಸಾಗರ ತಾಲೂಕಿನ ಸಿಂಗಧೂರು ಬಳಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣ ಕಾಮಗಾರಿಯೂ ಸೇರುತ್ತದೆ ಎಂದು ಹೇಳಿದರು
ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು, ನೀರಾವರಿ, ಶಾಲೆಯಗಳಲ್ಲಿ ಮೂಲಭೂತ ಸೌಲಭ್ಯ, ಕುಡಿಯುವ ನೀರು, ರಸ್ತೆ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಪ್ರಗತಿಯಲ್ಲಿವೆ ಎಂದರು.
ಕೇಂದ್ರ ಸರ್ಕಾರದ ನೆರವಿನೊಂದಿಗೆ ಜಿಲ್ಲೆಯಲ್ಲಿ ಹಲವಾರು ರೈಲ್ವೆ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಶಿವಮೊಗ್ಗ, ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ ಹಾಗೂ ಜಿಲ್ಲೆಯಲ್ಲಿ ರಸ್ತೆ ಸಂಪರ್ಕ ಸುಧಾರಣೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಪ್ರಗತಿಯಲ್ಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಇತರರಿದ್ದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿ ನಮ್ಮ ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಆರೋಗ್ಯ, ಶಿಕ್ಷಣ, ಕೃಷಿ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ.
–ಬಿ.ಎಸ್ .ಯಡಿಯೂರಪ್ಪ, ಮುಖ್ಯಮಂತ್ರಿ