ಭದ್ರಾವತಿ: ತಾಲ್ಲೂಕಿನ ಕಾರೇಹಳ್ಳಿ ಗ್ರಾಮದಲ್ಲಿ ಈಚೆಗೆ ಗಂಡು ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಬೋನಿಗೆ ಸಿಕ್ಕಿ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿಗೆ ಬಿಟ್ಟರು. ಇತ್ತೀಚೆಗೆ ಗ್ರಾಮದ ಮನೆಯೊಂದರಲ್ಲಿ ಸಾಕು ನಾಯಿಯೊಂದರ ಮೇಲೆ ಚಿರತೆ ದಾಳಿ ನಡೆಸಿತ್ತು.
ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅಧಿಕಾರಿಗಳು ಚಿರತೆ ಸೆರೆಗೆ ಬೋನು ಇಟ್ಟಿದ್ದರು.
ಶಾಸಕ ಬಿ.ಕೆ. ಸಂಗಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದು, ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.
ತಾಲ್ಲೂಕಿನ ಕೆಲವೆಡೆ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಎರಡು ತಿಂಗಳ ಹಿಂದೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಬಳಿ ಇಟ್ಟಿದ್ದ ಬೋನಿಗೆ ಚಿರತೆ ಮರಿಯೊಂದು ಬಿದ್ದಿತ್ತು.