ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು. ಇದೇ ಉದ್ದೇಶದಿಂದ ಗುರುವಾರ ಮಾಸ್ಕ್ ಡೆ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

By admin

ನಿಮ್ಮದೊಂದು ಉತ್ತರ

You missed

error: Content is protected !!