ಬೆಂಗಳೂರು: ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಖ್ಯಾತ ಹಿರಿಯ ನಟಿ ಲೀಲಾವತಿ ಇಂದು ಸಂಜೆ ಇಹಲೋಕದ ಯಾತ್ರೆ ಮುಗಿಸಿದ್ದಾರೆ.


ವಯೋಸಜಹ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ.


ಅತ್ಯಂತ ಸ್ಪುರದ್ರೂಪಿ ನಟಿಯಾದ ಲೀಲಾವತಿ ಸುಮಾರು ಐದು ಭಾಷೆಗಳಲ್ಲಿ ನಟಸಿದ್ದು, ಕನ್ನಡದಲ್ಲಿ ಅತಿ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಲೀಲಾವತಿ ಅವರು, 400ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲೇ ಅಭಿನಯಿಸಿದ್ದಾರೆ ಎನ್ನುವುದು ವಿಶೇಷವಾಗಿದೆ.


ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.


ಜೀವಮಾನದ ಸಾಧನೆ
ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.
ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000£ರಯ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದಿದ್ದಾರೆ.
ಲೀಲಾವತಿ ಅವರ ಮೂಲ ಹೆಸರು ಲೀಲಾ ಕಿರಣ್. ಇವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿ¯್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನ¯್ಲÉÃ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.


ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದಾರೆ.
ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ಭಕ್ತ ಪ್ರಹ್ಲಾದದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.


ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.
ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.


70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.


ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!