ಮದ್ಯ ಸೇವಿಸಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದ ಸವಾರನೊಬ್ಬನಿಗೆ ಸ್ಥಳೀಯ ನ್ಯಾಯಾಲಯ ೧೧ ಸಾವಿರ ದಂಡ ವಿಧಿಸಿದೆ.

ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಯಶ್ರೀ ವೃತ್ತದಲ್ಲಿ ಠಾಣಾಧಿಕಾರಿ ರಮೇಶ್ ಅವರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ

ದ್ವಿಚಕ್ರ ವಾಹನ ಸವಾರರೊಬ್ಬರು ಮದ್ಯಪಾನ ಮಾಡಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘಿಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ೧೧ ಸಾವಿರ ದಂಡ ವಿಧಿಸಿ ಆದೇಶಿಸಿದೆ.