ಶಿವಮೊಗ್ಗ: ಡಾ.ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ನೇರ ಕಾರಣರಾಗಿದ್ದಾರೆ ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಸಂಚಾಲಕ ಬಿ.ಎ.ರಮೇಶ್‌ಹೆಗ್ಡೆ ಆರೋಪಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೧೪ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಯಾವುದೇ ಕಾರಣಕ್ಕೂ ಕರ್ನಾ ಟಕ ರಾಜ್ಯದಲ್ಲಿ ಡಾ.ಕಸ್ತೂರಿ ರಂಗನ್ ವರದಿ ಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಬಿಜೆಪಿ ನೀಡಿದ ಭರವಸೆ ಸುಳ್ಳಾಗಿದೆ ಎಂದರು.
೨೦೧೫, ೧೭ ಹಾಗೂ ೧೮ರಲ್ಲಿ ಮೂರು ಬಾರಿ ಕೇಂದ್ರ ಸರ್ಕಾರ ಶಿವಮೊಗ್ಗ ಜಿಲ್ಲೆಯ ೪೯೨ ಗ್ರಾಮಗಳನ್ನೊಳಗೊಂಡಂತೆ ಕರ್ನಾಟಕ ರಾಜ್ಯದ ೧೫೭೩ ಗ್ರಾಮಗಳನ್ನು ಡಾ.ಕಸ್ತೂರಿ ರಂಗನ್ ವರದಿ ರೀತಿಯ ಪಶ್ಚಿಮಘಟ್ಟ ಪ್ರದೇಶ ‘ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆಯನ್ನು ಹೊರಡಿಸಿದೆ ಎಂದು ದೂರಿದರು.
ಕೇಂದ್ರದ ಅರಣ್ಯ ಹಾಗೂ ಪರಿಸರ ಸಚಿವ ಪ್ರಕಾಶ್ ಜಾವಡೆಕರ್ ಅವರು ೨೦೧೪ ಹಾಗೂ ೧೮ರಲ್ಲಿ ರಾಷ್ಟ್ರೀಯ ಹಸಿರು ಪೀಠಕ್ಕೆ ಡಾ.ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸು ವುದಾಗಿ ಲಿಖಿತ ಹೇಳಿಕೆ ಹಾಗೂ ಪ್ರಮಾಣ ಪತ್ರ ಸಲ್ಲಿಸಿದ್ದರ ಸಲುವಾಗಿ ಕಳೆದ ಅಕ್ಟೋಬರ್‍ನಲ್ಲಿ ಡಿಸೆಂಬರ್ ೩೧ರೊಳಗಾಗಿ ಡಾ.ಕಸ್ತೂರಿ ರಂಗನ್ ವರದಿಯನ್ನು ಅಂತಿಮಗೊಳಿಸಬೇಕೆಂದು ರಾಷ್ಟ್ರೀಯ ಹಸಿರು ಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ ಎಂದರು.
೨೦೧೪ರಿಂದ ಈವರೆಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ ಸಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆಯಿಂದ ಕರ್ನಾಟಕವನ್ನು ಕೈಬಿಡಬೇಕೆಂದು ಹಾಗೂ ರಾಷ್ಟ್ರೀಯ ಹಸಿರು ಪೀಠಕ್ಕೆ ಡಾ.ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿ ಸುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಒತ್ತಡ ಹೇರುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಬಿಜೆಪಿ ನಾಯಕರಿಗೆ ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ಡಾ.ಕಸ್ತೂರಿ ರಂಗನ್ ವರದಿಯ ನೆನಪಾಗುತ್ತದೆ. ೨೦೧೪ರ ಲೋಕಸಭಾ ಚುನಾವಣೆಯಲ್ಲಿ ಹಾಗೂ ಈಗ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಡಾ.ಕಸ್ತೂರಿ ರಂಗನ್ ವರದಿಯ ಬಗ್ಗೆ ಪ್ರಸ್ತಾಪಿಸಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಕೇಂದ್ರ ಸರ್ಕಾರ ಡಾ.ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿಕೆ ನೀಡಿದ್ದು, ಆದರೆ ರಾಜ್ಯ ಬಿಜೆಪಿ ನಾಯಕರು ಈ ವರದಿಯನ್ನು ಅನುಷ್ಠಾನ ಗೊಳಿಸಲು ಬಿಡುವುದಿಲ್ಲ ಎಂಬ ಹೇಳಿಕೆಯು ಬಿಜೆಪಿಯ ದ್ವಂದ್ವ ನಿಲುವನ್ನು ಎತ್ತಿ ತೋರಿಸು ತ್ತದೆ. ಇದನ್ನು ನಾವು ಖಂಡಿಸುತ್ತೇವೆ ಎಂದ ಅವರು, ಪರಿಸರ ಸೂಕ್ಷ್ಮ ಪ್ರದೇಶ ಘೋಷಿಸಲು ಹೊರಡಿಸಿರುವ ಅಧಿಸೂಚನೆಯು ಪಶ್ಚಿಮ ಘಟ್ಟವನ್ನು ಜನಸಮೂಹದಿಂದ ಬೇರ್ಪಡಿಸಿ ಪ್ರತ್ಯೇಕ ವಲಯ ಸ್ಥಾಪಿಸುವ ಸಂಚಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಇಕ್ಕೇರಿ ರಮೇಶ್, ಜೆ.ಸುರೇಂದ್ರ, ಹೊಳೆಮಡಿಲು ವೆಂಕಟೇಶ್, ಸುಂದರೇಶ್, ರಾಮಕೃಷ್ಣಭಟ್ ಉಪಸ್ಥಿತರಿ ದ್ದರು.

ರಾಜ್ಯ ಬಿಜೆಪಿ ನಾಯಕರು ಡಾ.ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ಬಗ್ಗೆ ನಿರ್ಲಕ್ಷ್ಯತನ ತೋರದೆ ತಮ್ಮದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕರ್ನಾಟಕ ರಾಜ್ಯವನ್ನು ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆಯಿಂದ ಹಾಗೂ ರಾಷ್ಟ್ರೀಯ ಹಸಿರು ಪೀಠಕ್ಕೆ ಈ ಅಧಿಸೂಚನೆಯಿಂದ ಕೈಬಿಡುವಂತೆ ಹೊಸದಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಒತ್ತಡ ಹೇರುವಂತೆ ಒತ್ತಾಯಿಸಬೇಕು. ಇಲ್ಲದಿದ್ದಲ್ಲಿ ಇದಕ್ಕೆ ಸಂಪೂರ್ಣ ಜವಾಬ್ದಾರಿಯನ್ನು ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರರವರೇ ಹೊಣೆಹೊರಬೇಕಾಗುತ್ತದೆ. – ರಮೇಶ್ ಹೆಗ್ಡೆ

By admin

ನಿಮ್ಮದೊಂದು ಉತ್ತರ

You missed

error: Content is protected !!