ಶಿವಮೊಗ್ಗ,ಡಿ.೧೩: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಿಸಿಟಿವಿ, ಕ್ಯಾಮರಾ ಅಳವಡಿಸಬೇಕು ಮತ್ತು ಭದ್ರತೆ ಹೆಚ್ಚಿಸಬೇಕು ಎಂದು ನವಕರ್ನಾಟಕ ನಿರ್ಮಾಣ ವೇದಿಕೆಯ ವತಿಯಿಂದ ಇಂದು ಕೆಎಸ್‌ಆರ್‌ಟಿಸಿಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.


ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನರು ಪ್ರತಿನಿತ್ಯ ಆಗಮಿಸುತ್ತಾರೆ. ಇತ್ತೀಚೆಗೆ ಕಳ್ಳರ ಸಂಖ್ಯೆ ಹೆಚ್ಚಾಗಿದೆ . ಈ ವರ್ಷ ೨೧ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಇಲ್ಲಿ ಸಿಸಿ ಕ್ಯಾಮರಾಗಳು ಇಲ್ಲ.

ಪ್ರಯಾಣಿಕರ ಸೋಗಿನಲ್ಲಿ ಬರುವ ಕಳ್ಳರನ್ನು ಗುರುತಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಸಿಸಿ ಕ್ಯಾಮರಾಗಳನ್ನು ಹೆಚ್ಚಿಸಬೇಕು ಮತ್ತು ಪೋಲೀಸ್ ಸಿಬ್ಬಂದಿಗಳನ್ನು ನೇಮಿಸಬೇಕು ಹಾಗೆಯೇ ಬಸ್ ನಿಲ್ದಾಣದಲ್ಲಿ ಪೊಲೀಸ್

ಉಪಠಾಣೆ ತೆಗೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಗೋ.ರಮೇಶ್‌ಗೌಡ, ಸಂತೋಷ್, ನಿಂಗರಾಜ್, ಕುಮಾರ್, ಮಮತಾ, ರಾಜು, ಶರಣ, ಆಸೀಫ್, ರಾಜು ನಾಯಕ, ದಿನೇಶ್, ಮಣಿ ಮುಂತಾದವರು ಇದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!