ಶಿವಮೊಗ್ಗ: ಅಧಿಕ ಭಾರ ಸಾಗಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಜಂಟಿ ಸಾರಿಗೆ ಆಯುಕ್ತ ಹಾಗೂ ಆರ್.ಟಿ.ಒ. ಕಚೇರಿಯ ಮೋಟಾರು ವಾಹನ ನಿರೀಕ್ಷಿಕರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಂದು ಆರ್.ಟಿ.ಒ. ಕಚೇರಿ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಪ್ರತಿಭಟನೆ ನಡೆಸಿತು.


ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ಬಿಹೆಚ್ ರಸ್ತೆಯಲ್ಲಿ ಅಧಿಕ ಭಾರ ಹೊತ್ತು ಸಾಗಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕ ಬಾರಿ ಸಾರಿಗೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಕ್ರಮಕೈಗೊಂಡಿಲ್ಲ ಎಂದು ದೂರಿದರು.
ಮೋಟಾರು ವಾಹನ ನಿರೀಕ್ಷಕರು ಸಹ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು,

ಈ ಇಬ್ಬರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಮೌನವಾಗಿರುವುದು ಭ್ರಷ್ಟಾಚಾರದ ವಾಸನೆ ಬರುತ್ತಿದೆ. ವಾಹನ ಮಾಲೀಕರಿಂದ ಹಣ ಪಡೆಯುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಆರೋಪಿಸಿದರು.


ಸಾರಿಗೆ ಆಯುಕ್ತರು ಕೇಂದ್ರ ಸ್ಥಾನದಲ್ಲಿ ಇರುವುದೇ ಇಲ್ಲ. ಈ ಬಗ್ಗೆ ಮಾಹಿತಿ ಹಕ್ಕಿನಡಿ ಮಾಹಿತಿ ಕೋರಿದ್ದರೂ ತಪ್ಪಾಗಿ ಮಾಹಿತಿ ನೀಡಲಾಗುತ್ತಿದೆ. ಆರ್.ಟಿ.ಒ. ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಜಯಪ್ಪ, ಚೆಲುವರಾಜ್, ಶಶಿಕುಮಾರ್, ರಾಜಾಚಾರಿ, ವಿನೋದ್ ವಿ., ವೆಂಕಟೇಶ್, ಶಿವಕುಮಾರ್, ನೇತ್ರಾವತಿ, ಅವಿನಾಶ್ ಮೊದಲಾದವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!