ಶಿವಮೊಗ್ಗ, ಡಿ. 27 :

ರಾಜ್ಯ ಸರ್ಕಾರದ 5ನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.

ಇದನ್ನೂ ಓದಿ ತುಂಗಾತರಂಗ ಓದುಗರಿಗೆ ಮಾತ್ರ/ ನಿಮ್ಮ ತುಂಗಾತರಂಗ ವಿಶೇಷಾಂಕ “ತುಂಗೆಯ ವರುಣಾಂತರಂಗ” ಸಮಗ್ರ ಚಿತ್ರ ಬರಹ ಇದೆ, ನೋಡಿ.., https://tungataranga.com/?p=26250

ಅನುಮೋದನೆಗೊಂಡ ಅಭ್ಯರ್ಥಿಗಳಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ. 3000/- ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500/- ನಿರುದ್ಯೋಗ ಭತ್ಯ ನೀಡಲಾಗುವುದು. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.
ಅರ್ಜಿ ಸಲ್ಲಿಸಲು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.


ಅರ್ಜಿ ಸಲ್ಲಿಸುವ ದಿನಾಂಕ ಡಿ. 26 ರಿಂದ ಪ್ರಾರಂಭಗೊಂಡಿದ್ದು, ಆಸಕ್ತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್‍ಗಳೊಂದಿಗೆ ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‍ನಲ್ಲಿ ಯುವನಿಧಿ ಯೋಜನೆ ಸೇವೆ ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

By admin

ನಿಮ್ಮದೊಂದು ಉತ್ತರ

error: Content is protected !!