ಶಿವಮೊಗ್ಗ : ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಚಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಿ ಡಿಡಿಪಿಐ ಸಿ.ಆರ್‌.ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ.

ಕೋಲಾರದ ಘಟನೆ ಮಾಸುವ ಮುನ್ನವೇ ಶಿಕ್ಷಣ ಸಚಿವ ಮಧುಬಂಗಾರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೊಂದು ಘಟನೆ ನಡೆದಿರುವುದು ದುರಂತವೇ ಹೌದು.

ಈ ಸಂಬಂಧ ಬುಧವಾರ ಮಧ್ಯಾಹ್ನ ಭದ್ರಾವತಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗುರುವಾರ ಬೆಳಗ್ಗೆ ಘಟನೆ ಸಂಬಂಧ ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ವರದಿ ಆಧಾರ ಮೇಲೆ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!