ಡಿ.21: ರೈತ ಸಂಘದಿಂದ ಉಪವಾಸ ಸತ್ಯಾಗ್ರಹ


ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕ ದಿ| ಎನ್.ಡಿ. ಸುಂದರೇಶ್ ಸ್ಮರಣಾರ್ಥ ಹಾಗೂ ಡಿ.21ರ ಸೋಮವಾರ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚ ಕರೆಕೊಟ್ಟ ಮೇರೆಗೆ ಅಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ. ಗಂಗಾಧರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ರೈತ ಸಂಘದಿಂದ ಉಪವಾಸ ಸತ್ಯಾಗ್ರಹ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್. ಜಯಪ್ಪಗೌಡ್ರು ತಿಳಿಸಿದ್ದಾರೆ.

ಬಿ.ಜೆ. ಅಕ್ಷತಾಗೆ ಡಾಕ್ಟರೇಟ್


ಶಿವಮೊಗ್ಗ: ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಜೆ. ಅಕ್ಷತಾ ಅವರು ವಾಣಿಜ್ಯ ಶಾಸ್ತ್ರದಲ್ಲಿ ಮಂಡಿಸಿದ “ಜಾಬ್ ಸ್ಯಾಟಿಸ್ಫ್ಯಾಕ್ಷನ್ ಆಫ್ ವುಮನ್ ಎಂಪ್ಲಾಯಿಸ್ ಇನ್ ಬಿಸಿಓ ಇಂಡಸ್ಟ್ರೀ-ಎ ಕೇಸ್ ಸ್ಟಡಿ ಆಫ್ ಸೆಲೆಕ್ಟೆಡ್ ಬಿಸಿಓ ಇಂಡಸ್ಟ್ರೀ ಇನ್ ಕರ್ನಾಟಕ” ಮಹಾಪ್ರಬಂಧಕ್ಕೆ ಬೆಳಗಾವಿಯ ರಾಣಿಚೆನ್ನಮ್ಮ ವಿವಿಯು ಡಾಕ್ಟರೇಟ್ ಪದವಿ ನೀಡಿದೆ.
ಇವರಿಗೆ ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಸ್.ಬಿ. ಆಕಾಶ ಅವರು ಮಾರ್ಗದರ್ಶಕರಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ಸಹುದ್ಯೋಗಿಗಳು ಅಭಿನಂದಿಸಿದ್ದಾರೆ.

ಶ್ರೀ ಬಸವೇಶ್ವರ ವೀರಶೈವ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ


ಶಿವಮೊಗ್ಗ : ನೆಹರೂ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ವೀರಶೈವ ಸಮಾಜದ ವತಿಯಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.
೨೦೧೯-೨೦ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಸಂಘದ ಸದಸ್ಯತ್ವದ ಗುರುತಿನ ಚೀಟಿ, ಅಂಕಪಟ್ಟಿ ನಕಲು ಹಾಗೂ ಇತ್ತೀಚಿನ ಭಾವ ಚಿತ್ರದ 2 ಫೋಟೊ ದೊಂದಿಗೆ ಡಿ.31ರೊಳಗಾಗಿ ಸಂಘದ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸುವಂತೆ ಅಧ್ಯಕ್ಷ ಎನ್.ಜೆ. ರಾಜಶೇಖರ್ ಮತ್ತು ಗೌರವ ಕಾರ್ಯದರ್ಶಿ ಟಿ.ಬಿ. ಜಗದೀಶ್ ಕೋರಿದ್ದಾರೆ.

ವಿಕಲಚೇತನರ ಸ್ಕಾಲರ್‌ಶಿಪ್‌ಗೆ ಆನ್‌ಲೈನ್ ಅರ್ಜಿ ಆಹ್ವಾನ

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿಗಳ ನೋಂದಣಿಯು ಪ್ರಾರಂಭಿಸಿದೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಈ ಯೋಜನೆ ಯಲ್ಲಿ ಅವಕಾಶ ಪಡೆಯಲು ವಿದ್ಯಾರ್ಥಿಗಳು ವೆಬ್‌ಸೈಟ್ ಮೂಲಕ ಡಿಸೆಂಬರ್-31 ರೊಳಗಾಗಿ ಅರ್ಜಿ ಸಲ್ಲಿಸುವುದು. ಸಲ್ಲಿಸಿದ ಅರ್ಜಿ ಹಾರ್ಡ್‌ಕಾಪಿಯನ್ನು ಆಯಾ ತಾಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್. ಡಬ್ಲ್ಯೂ ಹಾಗೂ ಯು.ಆರ್. ಡಬ್ಲ್ಯೂ ಇವರ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.
ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-250676 ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!