*
ಶಿವಮೊಗ್ಗ, ಜನವರಿ 05,
      ಜನವರಿ 26 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು

.
        ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


     ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು.


         ಪೆರೇಡ್ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ದತೆ, ಸೌಂಡ್ ಸಿಸ್ಟಂ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ್ರ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
       ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು.


      ಸ್ವಾಗತ ಕಮಾನು ಸಿದ್ದತೆ, ಸೂಕ್ತ ಪೊಲೀಸ್ ಭದ್ರತೆ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಪ ಅಲಂಕಾರ ವ್ಯವಸ್ಥೆ, ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು.


       ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾದ ಪೆರೇಡ್ ಪ್ರದರ್ಶನವನ್ನು ಪೊಲೀಸ್ ಇಲಾಖೆ, ಕೆಎಸ್‍ಆರ್‍ಪಿ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್‍ಸಿಸಿ, ಅಗ್ನಿ ಶಾಮಕ ದಳ, ಹೋಂಗಾಡ್ರ್ಸ್ ಹಾಗೂ ವಿದ್ಯಾರ್ಥಿಗಳಿಂದ ಏರ್ಪಡಿಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.


     ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಮತ್ತು ಬಿಇಓ ಅವರಿಗೆ ಸೂಚನೆ ನೀಡಿದರು.
     ಗಣರಾಜ್ಯೊತ್ಸವ ಆಚರಣೆಯ ಪೂರ್ವಸಿದ್ದತೆಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ  ಸಾಧಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಉಪ ಸಮಿತಿ ರಚಿಸಿಲು ತೀರ್ಮಾನಿಸಿದ ಅವರು  ಉಪವಿಭಾಗಾಧಿಕಾರಿಗಳು ಗಣರಾಜ್ಯೋತ್ಸವದ ಪೂರ್ವಸಿದ್ದತೆಯನ್ನು ಪರಿಶೀಲಿಸುವಂತೆ ತಿಳಿಸಿದರು. ಹಾಗೂ ಅಂದು  ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸುವಂತೆ ತಿಳಿಸಿದರು.
      ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!