ಸಾಗರ : ಭಾರಂಗಿ ಹೋಬಳಿಯಲ್ಲಿ ನಡೆದಿರುವ ಸರಣಿ ಕಳ್ಳತನಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದು,

ಇನ್ನೂ ಮೂರ‍್ನಾಲ್ಕು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಡಿ.ವೈ.ಎಸ್.ಪಿ. ಗೋಪಾಲಕೃಷ್ಣ ಟಿ.ನಾಯ್ಕ್ ತಿಳಿಸಿದರು.
ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಬ್ಯಾಕೋಡು ಭಾಗದ ಸಸಿಗೊಳ್ಳಿ ನಾರಾಯಣಗುರು ಸಹಕಾರ ಸಂಘ ಮತ್ತು ಹಾಲೆಮನೆ ಚಂದ್ರನಾಥ ಸ್ವಾಮಿ ಜೈನ ಬಸದಿಯಲ್ಲಿ

ನಡೆದಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಲಾಗಿತ್ತು ಎಂದರು.
ಕಳ್ಳತನಕ್ಕೆ ಸಂಬಂಧಪಟ್ಟಂತೆ ಮಂಗಳೂರು ಮೂಲದ ಓರ್ವ ಆರೋಪಿಯನ್ನು

ಕಳ್ಳತನ ಮಾಡಿದ ಮಾಲು ಸಹಿತ ವಶಕ್ಕೆ ಪಡೆಯಲಾಗಿದೆ. ಇನ್ನು ಮೂರ‍್ನಾಲ್ಕು ಜನರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಹಾಲಿ ಬಂಧನಕ್ಕೆ ಒಳಗಾಗಿರುವ ವ್ಯಕ್ತಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ.

ಒಂದು ವಾರದಲ್ಲಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.

By admin

ನಿಮ್ಮದೊಂದು ಉತ್ತರ

error: Content is protected !!