
ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ
ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯವು ಪ್ರಸಕ್ತ ಸಾಲಿನಲ್ಲಿ ಆರನೇ ಮತ್ತು ಒಂಭತ್ತನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆರನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಲಾಗಿದ್ದ ದಿನಾಂಕವನ್ನು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಡಿಸೆಂಬರ್ 15 ರಿಂದ ಡಿ. 29ರವರೆಗೆ ವಿಸ್ತರಿಸಲಾಗಿದೆ ಹಾಗೂ ತಿದ್ದುಪಡಿ ಮಾಡಲು ಡಿ. 31 ಆಗಿರುತ್ತದೆ.
ಒಂಭತ್ತನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ. 15 ರಿಂದ ಡಿ. 31 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಈ ಸದಾವಕಾಶದ ಲಾಭ ಪಡೆದುಕೊಳ್ಳುವಂತೆ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ವೆಬ್ಸೈಟ್ www.navodaya.gov.in or www.nvsadmissionclassnine.in ನ್ನು ಸಂಪರ್ಕಿಸುವುದು.
ಸಂತೆ ಜಾತ್ರೆಗಳ ನಿಷೇಧ
ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಗ್ರಾಮ ಪಂಚಾಯ್ತಿಗಳಲ್ಲಿ ಡಿಸೆಂಬರ್ 22 ರಂದು 1ನೇ ಹಂತದ ಚುನಾವಣೆ ಹಾಗೂ ಡಿ. ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರ ಗ್ರಾಮ ಪಂಚಾಯತಿಗಳಲ್ಲಿ ಡಿಸೆಂಬರ್ -27 ರಂದು ಚುನಾವಣೆ ನಡೆಯುವುದರಿಂದ ಈ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಗಳ ಚುನಾವಣೆ ಶಾಂತಿಯುತವಾಗಿ ನಡೆಸಲು ಹಾಗೂ ಮತದಾನಕ್ಕೆ ಅನುಕೂಲವಾಗುವಂತೆ ಚುನಾವಣೆಯ ದಿನ ಬೆಳಗ್ಗೆ 5 ರಿಂದ ಸಂಜೆ 7 ರವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ-ಕುಂಸಿ ರೈಲ್ವೆ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ
ಶಿವಮೊಗ್ಗ: ಶಿವಮೊಗ್ಗ ಮತ್ತು ಕುಂಸಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.67ರಲ್ಲಿ ಸಂಚರಿಸುವ ಮಾರ್ಗದಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದರಿಂದ ಡಿಸೆಂಬರ್ 18 ರ ಬೆಳಗ್ಗೆ 7.30 ರಿಂದ ಡಿ.19ರ ಬೆಳಗ್ಗೆ 7.30 ರವರಿಗೆ ರಸ್ತೆ ಸಂಚಾರವನ್ನು ಲೆವೆಲ್ ಕ್ರಾಸ್ -73ರ ಬಾಳೆಕೊಪ್ಪ-ವಿಠಲಗೊಂಡನಕೊಪ್ಪ, ಕೇಸಿನಕಟ್ಟೆ, ಹೊನ್ನಾಳಿ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶದಲ್ಲಿ ಸೂಚಿಸಿದ್ದಾರೆ.