
ಶಿವಮೊಗ್ಗ, ಡಿ. 16 :
ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕುಗಳ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ದಿನಾಂಕ: 20-12-2020 ರ ಸಂಜೆ 5.00 ರಿಂದ ದಿ: 22-12-2020ರ ಸಂಜೆ 5.00ರವರೆಗೆ ಹಾಗೂ ಎರಡನೇ ಹಂತದಲ್ಲಿ ಶಿಕಾರಿಪುರ, ಸಾಗರ, ಸೊರಬ ಮತ್ತು ಹೊಸನಗರ ತಾಲೂಕುಗಳ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ದಿನಾಂಕ: 25-12-2020 ರ ಸಂಜೆ 5-00 ರಿಂದ ದಿನಾಂಕ: 27-12-2020ರ ಸಂಜೆ 5-00 ರವರೆಗೆ ಮದ್ಯ ಮಾರಾಟ ನಿಷೇದಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಚುನಾವಣೆ ನಡೆಯುವ ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ತರಹದ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನು ಕಡ್ಡಾಯವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
