ಶಿವಮೊಗ್ಗ : ಕಳೆದ 10ದಿನಗಳ ಹಿಂದೆ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದ್ದ ಇಂಟರ್‌ಸಿಟಿ ಹಾಗೂ ರಾತ್ರಿ ರೈಲುಗಳ ಓಡಾಟವನ್ನು 2021ರ ಜನವರಿ 31ರವರೆಗೆ ವಿಸ್ತರಿಸಲಾಗಿದ್ದು, ಪ್ರಯಾಣಿಕರು ಈ ರೈಲು ಸಂಚಾರದ ಲಾಭ ಪಡೆದುಕೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.
ರೈಲು ಸಾರ್ವಜನಿಕ ಸೇವೆಗೆ ಬಳಕೆಯಾಗುತ್ತಿದ್ದು, ಪ್ರಯಾಣಿಕರಿಗೆ ಅನುಕೂಲವಾಗಿದೆ ಎಂದು ಸಂಸದರು ರೈಲ್ವೇ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿರುವ ಕಾರಣ ಪ್ರಾಯೋಗಿಕವಾಗಿ ಸಂಚರಿಸುತ್ತಿದ್ದ ರೈಲುಗಳ ಓಡಾಟದ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಸದರಿ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಟಿಕೇಟುಗಳನ್ನು ಮುಂಗಡವಾಗಿ ಕಾಯ್ದಿರಿಸಿಕೊಂಡು ಪ್ರಯಾಣಿಸುವಂತೆ ಮನವಿ ಮಾಡಿರುವ ಅವರು, ಅವಧಿ ವಿಸ್ತರಿಸಿ ಆದೇಶ ಹೊರಡಿಸಿರುವ ರೈಲ್ವೇ ಜನರಲ್ ಮ್ಯಾನೇಜರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!